ಜಪಾನ್‌ ಮಾಜಿ ಪ್ರಧಾನಿ ಶಿಂಜೋ ಅಬೆ ಅಂತ್ಯಕ್ರಿಯೆ ವಿರೋಧಿಸಿ ಬೆಂಕಿ ಹಚ್ಚಿಕೊಂಡ ವ್ಯಕ್ತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಹತ್ಯೆಗೀಡಾದ ಜಪಾನ್ ಮಾಜಿ ಪ್ರಧಾನಿ ಶಿಂಜೊ ಅಬೆ ಅವರ ಅಂತ್ಯಕ್ರಿಯೆಯನ್ನು ವಿರೋಧಿಸಿ ವ್ಯಕ್ತಿಯೊಬ್ಬ ಜಪಾನ್‌ ಪ್ರಧಾನ ಮಂತ್ರಿ ಕಚೇರಿ ಬಳಿ ಬುಧವಾರ ತನಗೆ ತಾನೇ ಬೆಂಕಿ ಹಚ್ಚಿಕೊಂಡಿದ್ದಾನೆ. ಬೆಂಕಿಯಿಂದ ಸುಟ್ಟು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಆತನನ್ನು ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ತಿಳಿಸಿವೆ.
ಪೊಲೀಸರು, ಪ್ರಧಾನಿ ಕಚೇರಿ ಮತ್ತು ಸಂಪುಟ ಕಚೇರಿ ಘಟನೆ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದೆ. ಬೆಂಕಿಯನ್ನು ನಂದಿಸಲು ಪ್ರಯತ್ನಿಸಿದ ಪೊಲೀಸ್ ಅಧಿಕಾರಿಯೊಬ್ಬರು ಈ ಪ್ರಕ್ರಿಯೆಯಲ್ಲಿ ಗಾಯಗೊಂಡಿದ್ದಾರೆ ಎಂದು ದೂರದರ್ಶನ ಕೇಂದ್ರ ತಿಳಿಸಿದೆ.
ಅಂತ್ಯಕ್ರಿಯೆಗೆ ತನ್ನ ವಿರೋಧವನ್ನು ವ್ಯಕ್ತಪಡಿಸಿರುವ ವ್ಯಕ್ತಿಯ ಬಳಿ ಒಂದು ಚೀಟಿ ಕಂಡುಬಂದಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಜಪಾನ್‌ನ ಸುದೀರ್ಘ ಸೇವೆ ಸಲ್ಲಿಸಿದ ಪ್ರಧಾನ ಮಂತ್ರಿ ಅಬೆ ಜುಲೈ 8 ರಂದು ಪ್ರಚಾರ ಮಾಡುವಾಗ ಗುಂಡಿಕ್ಕಿ ಕೊಲ್ಲಲ್ಪಟ್ಟಟ್ಟಿದ್ದರು. ಅವರ ಅಂತ್ಯಕ್ರಿಯೆಯನ್ನು ಸೆಪ್ಟೆಂಬರ್ 27 ರಂದು ನಡೆಸಲಾಗುತ್ತಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!