ಭಾರತಕ್ಕೆ ಆಗಮಿಸಿದ ಜಪಾನ್‌ ಪ್ರಧಾನಿ: ಪಿಎಂ ಮೋದಿ ಜೊತೆ ಉಕ್ರೇನ್‌ ಕದನ ಸೇರಿ ಹಲವು ವಿಚಾರ ಚರ್ಚೆ ಚರ್ಚೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್
ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾ ಅವರು ಭಾರತಕ್ಕೆ ಆಗಮಿಸಿದ್ದಾರೆ. ನವದೆಹಲಿಯಲ್ಲಿ ಆಯೋಜಿಸಲಾಗಿರುವ 14ನೇ ಭಾರತ-ಜಪಾನ್ ಶೃಂಗಸಭೆಯಲ್ಲಿ ಅವರು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಸಭೆಯಲ್ಲಿ ಉಕ್ರೇನ್ ಬಿಕ್ಕಟ್ಟು, ಇಂಡೋ-ಪೆಸಿಫಿಕ್ ಪ್ರದೇಶದಲ್ಲಿನ ಕಾರ್ಯತಂತ್ರಗಳು, ಹೂಡಿಕೆ ವಿಚಾರ ಸೇರಿದಂತೆ ಹಲವು ವಿಚಾರಗಳ ಕುರಿತು ಚರ್ಚೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
ಅಲ್ಲದೆ, ಎರಡೂ ರಾಷ್ಟ್ರಗಳ ನಡುವಿನ ದ್ವಿಪಕ್ಷೀಯ ಒಪ್ಪಂದಗಳು, ರಕ್ಷಣಾ ಕ್ಷೇತ್ರದಲ್ಲಿ ಪರಸ್ಪರ ಸಹಕಾರದ ಬಗ್ಗೆ ಚರ್ಚೆಗಳು ನಡೆಯಲಿವೆ. ಮುಂಬೈ-ಅಹಮದಾಬಾದ್ ಬುಲೆಟ್‌ ಟ್ರೇನ್‌ ಯೋಜನೆ ಪ್ರಗತಿ, ಅತ್ಯಧುನಿಕ ಸುಧಾರಿತ ತಂತ್ರಜ್ಞಾನಗಳ ಅಭಿವೃದ್ಧಿಗೆ ಧೀರ್ಘಕಾಲೀನ ಸಂಶೋಧನಾ ಪಾಲುದಾರಿಯಲ್ಲಿ ತೊಡಗುವ ಕುರಿತಾಗಿ ಮಹತ್ವದ ಚರ್ಚೆಗಳು ನಡೆಯಲಿವೆ. ಈ ಸಭೆಯ ಬಳಿಕ ಮಾರ್ಚ್ 20ರಂದು ಜಪಾನ್‌ ಪ್ರಧಾನಿ ಕಾಂಬೋಡಿಯಾ ಪ್ರವಾಸ ಕೈಗೊಳ್ಳಲಿದ್ದಾರೆ.
ಕಿಶಿದಾ 2021 ರ ಅಕ್ಟೋಬರ್‌ನಲ್ಲಿ ಜಪಾನ್‌ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಈವೇಳೆ ಅವರೊಂದಿಗೆ ದೂರವಾಣಿ ಕರೆ ಮಾಡಿ ಮಾತನಾಡಿದ್ದ ಮೋದಿ, ಉಭಯ ದೇಶಗಳ ನಡುವಿನ ವಿಶೇಷ ಕಾರ್ಯತಂತ್ರ ಮತ್ತು ಜಾಗತಿಕ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ಬಯಕೆಯನ್ನು ವ್ಯಕ್ತಪಡಿಸಿದ್ದರು.
2019ರಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಆಗಿನ ಜಪಾನ್ ಪ್ರಧಾನಿ ಶಿಂಜೋ ಅಬೆ ನಡುವೆ ನಿಗದಿಯಾಗಿದ್ದ ಸಭೆ ಅಸ್ಸಾಂನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆಯ ಕಾರಣದಿಂದಾಗಿ ಮುಂದೂಡಲಾಗಿತ್ತು. ಆ ಬಳಿಕ ನಡೆಯುತ್ತಿರುವ ಸಭೆ ಇದಾಗಿರುವುದರಿಂದ ಮಹತ್ವ ಪಡೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!