ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದಲ್ಲೇ ಇದ್ದು ಅದೆಷ್ಟು ಜನರು ಕನ್ನಡವನ್ನು ಮಾತನಾಡಲು ಹಿಂದೆ ಮುಂದೆ ಯೋಚಿಸುತ್ತಾರೆ. ಅನೇಕರು ಕಡೆಗಣಿಸುತ್ತಾರೆ. ಇದರ ನಡುವೆ ಹೊರ ದೇಶದಿಂದ ಬಂದ ಯುವತಿಯೊಬ್ಬಳು ಕನ್ನಡದಲ್ಲಿ ಮಾತನಾಡಿ ಎಲ್ಲರ ಮನ ಗೆದ್ದಿದ್ದಾಳೆ.
ಮೂಲತಃ ಜರ್ಮನಿಯಲ್ಲಿ ಹುಟ್ಟಿದ ಬೆಳೆದ ಯುವತಿ ಜೆನಿಫರ್ ಇತ್ತೀಚಿನ ದಿನಗಳಲ್ಲಿ ಕನ್ನಡಿಗರ ಮನೆಮಾತಾಗುತ್ತಿದ್ದಾಳೆ. ಹೌದು ಜೆನಿಫರ್ ಬಾಯಲ್ಲಿ ಕನ್ನಡ ಕೇಳುವುದೇ ಒಂದು ಚಂದ ಎಂದು ಎನ್ನುತ್ತಿದ್ದಾರೆ ನೆಟ್ಟಿಗರು.
ಸೋಶಿಯಲ್ ಮೀಡಿಯಾ ಮೂಲಕ ಕನ್ನಡಿಗರ ಹೃದಯ ಗೆದ್ದಿರುವ ಈಕೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ.
ಸೋಶಿಯಲ್ ಮೀಡಿಯಾಗಳಲ್ಲಿ ಸಖತ್ ಆಕ್ಟೀವ್ ಆಗಿರುವ ಜೆನಿಫರ್ ಕರ್ನಾಟಕದಲ್ಲಿ ನೆಲೆಸಿದ್ದು, ಈಗ ಎಲ್ಲರೂ ಬೆರಗಾಗುವಂತೆ, ಇಷ್ಟಪಟ್ಟು ಕನ್ನಡ ಮಾತನಾಡುತ್ತಾರೆ. ಅವರ ಕನ್ನಡ ಕೇಳಿ ನೆಟ್ಟಿಗರು ಫಿದಾ ಆಗಿದ್ದಾರೆ.
@ChekrishnaCk ಎಂಬ ಟ್ವಿಟರ್ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ.
ಸೆ.09ರಂದು ಹಂಚಿಕೊಂಡಿರುವ ವಿಡಿಯೋ ಕೇವಲ ಒಂದೇ ದಿನದಲ್ಲಿ 1.2 ಮಿಲಿಯನ್ ಅಂದರೆ 10ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಜೊತೆಗೆ ಸಾಕಷ್ಟು ನೆಟ್ಟಿಗರಿಂದ ಭಾರೀ ಶ್ಲಾಘನೆ ವ್ಯಕ್ತವಾಗಿದೆ.