ಟಿ20 ವಿಶ್ವಕಪ್‌ ಯಿಂದ ಜಸ್‌ಪ್ರೀತ್‌ ಬುಮ್ರಾ ಔಟ್?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಟಿ20 ವಿಶ್ವಕಪ್‌ ಆರಂಭಕ್ಕೂ ಮುನ್ನವೇ ಟೀಮ್‌ ಇಂಡಿಯಾಗೆ ದೊಡ್ಡ ಆಘಾತ ಎದುರಾಗಿದೆ. ಬಿಸಿಸಿಐ ಮೂಲಗಳ ಪ್ರಕಾರ, ಬ್ಯಾಕ್‌ ಸ್ಟ್ರೆಸ್‌ ಫ್ರಾಕ್ಚರ್‌ಗೆ ಒಳಗಾಗಿರುವ ಜಸ್‌ಪ್ರೀತ್‌ ಬುಮ್ರಾ ಆಸ್ಟ್ರೇಲಿಯಾದ ಆತಿಥ್ಯದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ನಿಂದ ಹೊರಬಿದ್ದಿದ್ದಾರೆ ಎಂದು ವರದಿಯಾಗಿದೆ.
ಆದರೆ ಇದನ್ನು ಬಿಸಿಸಿಐ ಇನ್ನಷ್ಟೇ ಅಧಿಕೃತವಾಗಿ ಖಚಿತಪಡಿಸಬೇಕಿದೆ.

ಗಾಯದ ಕುರಿತಾಗಿ ಕೊನೆ ಹಂತದಲ್ಲಿ ಮಾಹಿತಿ ನೀಡಿದ್ದರಿಂದ ಜಸ್‌ಪ್ರೀತ್‌ ಬುಮ್ರಾ, ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಕೊನೇ ಹಂತದಲ್ಲಿ ತಂಡದಿಂದ ಹೊರಬಿದ್ದಿದ್ದರು.

ಜಸ್‌ಪ್ರೀತ್‌ ಬುಮ್ರಾ ಅವರ ಗಾಯಕ್ಕೆ ಶಸ್ತ್ರ ಚಿಕಿತ್ಸೆ ಅಗತ್ಯವಿದೆಯೇ ಅಥವಾ ಇಲ್ಲವೇ ಎನ್ನುವುದನ್ನು ರಾಷ್ಟ್ರೀಯ ಕ್ರಿಕೆಟ್‌ ಅಕಾಡೆಮಿಯ ಫಿಸಿಯೋಗಳು ನಿರ್ಧಾರ ಮಾಡಲಿದ್ದಾರೆ ಎಂದು ವರದಿಯಾಗಿದೆ.

ಹಾಗೇನಾದರೂ ಅವರಿಗೆ ಗಾಯವಾಗಿದ್ದು, ಶಸ್ತ್ರಚಿಕಿತ್ಸೆ ಅಗತ್ಯವಿಲ್ಲದೇ ಇದ್ದರೂ, 4 ರಿಂದ 6 ತಿಂಗಳ ಕಾಲ ಅವರು ಕ್ರಿಕೆಟ್‌ ಮೈದಾನದಿಂದ ಹೊರಗುಳಿಯಬೇಕಾಗಬಹುದು ಎಂದು ಬಿಸಿಸಿಐ ಮೂಲಗಳು ಹೇಳಿವೆ.

ಗಾಯದ ಕಾರಣದಿಂದಾಗಿ ಬುಮ್ರಾ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಪಂದ್ಯದಿಂದ ಹೊರಬಿದ್ದಿದ್ದರು. ದೀರ್ಘಕಾಲದ ಗಾಯದ ಬಳಿಕವಷ್ಟೇ ಅವರು ಆಸ್ಟ್ರೇಲಿಯಾ ವಿರುದ್ಧದ ಸರಣಿಯ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಾಪಸಾಗಿದ್ದರು. ಆದರೆ, ಈಗ ಅವರು ಎನ್‌ಸಿಎಯಲ್ಲಿ ಗಂಭೀರ ಪ್ರಮಾಣದ ಪುನಶ್ಚೇತನ ಶಿಬಿರದಲ್ಲಿ ಭಾಗಿಯಾಗಲಿದ್ದು, ಮುಂದಿನ ಕೆಲ ವಾರಗಳಲ್ಲಿ ಅವರ ಗಾಯದ ಗಂಭೀರತೆಯ ಬಗ್ಗೆ ಸ್ಪಷ್ಟ ಚಿತ್ರಣ ಸಿಗಲಿದೆ ಎಂದು ಬಿಸಿಸಿಐ ಮೂಲ ತಿಳಿಸಿದೆ.

ಬುಮ್ರಾ ಅವರ ಫಿಟ್‌ನೆಸ್‌ ಟೀಮ್‌ ಇಂಡಿಯಾ ಥಿಂಕ್‌ ಟ್ಯಾಂಕ್‌ಗೆ ಸಮಸ್ಯೆಯಾಗಿ ಪರಿಣಮಿಸಿದೆ. ಆಸ್ಟ್ರೇಲಿಯಾ ವಿರುದ್ಧ ಸರಣಿಯ ಮೂಲಕ ಅಂತಾರಾಷ್ಟ್ರೀಯ ಕ್ರಿಕಟ್‌ಗೆ ಮರಳಿದ್ದ ಜಸ್‌ಪ್ರೀತ್‌ ಬುಮ್ರಾ, ನಾಗ್ಪುರದಲ್ಲಿ ನಡೆದ ಮಳೆಬಾಧಿತ ಪಂದ್ಯದಲ್ಲಿ ಆಡಿದ್ದರು. ಆ ಬಳಿಕ ಹೈದರಾಬಾದ್‌ನಲ್ಲಿ ನಡೆದ ನಿರ್ಣಾಯಕ ಪಂದ್ಯದಲ್ಲಿ 50 ರನ್‌ ನೀಡಿ ವಿಕೆಟ್‌ ಪಡೆಯಲು ವಿಫಲರಾಗಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!