ಹೊಸದಿಗಂತ ಡಿಜಿಟಲ್ ಡೆಸ್ಕ್:
ಟೀಂ ಇಂಡಿಯಾದ ವೇಗದ ಬೌಲರ್ ಜಸ್ಟ್ರೀತ್ ಬುಮ್ರಾ ಶ್ರೀಲಂಕಾ ವಿರುದ್ಧದ ಪಿಂಕ್ ಬಾಲ್ ಪಂದ್ಯದಲ್ಲಿ ದಾಖಲೆ ಬರೆದಿದ್ದಾರೆ.
ಬೆಂಗಳೂರಿನಲ್ಲಿ ನಡೆಯುತ್ತಿರುವ ಪಿಂಕ್ ಬಾಲ್ ನ ಮೊದಲ ಇನ್ನಿಂಗ್ಸ್‌ನಲ್ಲಿ ಬುಮ್ರಾ ಈ ಸಾಧನೆ ಮಾಡಿದ್ದಾರೆ. ಮೊದಲ ಬಾರಿಗೆ ತವರಿನಲ್ಲಿ ಭಾರತದ ವೇಗಿ ಜಸ್ಪ್ರೀತ್ ಬೂಮ್ರಾ ಐದು ವಿಕೆಟ್ ಕಬಳಿಸಿದ್ದಾರೆ.
ಈ ಹಿಂದೆ ಇಂಗ್ಲೆಂಡ್, ವೆಸ್ಟ್ ಇಂಡೀಸ್, ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾದಲ್ಲಿ ಬೂಮ್ರಾ ಐದು ವಿಕೆಟ್ ಸಾಧನೆ ಮಾಡಿದ್ದರು.
ಬುಮ್ರಾ ಅವರ ಬೌಲಿಂಗ್ ದಾಳಿಗೆ ತತ್ತರಿಸಿದ ಲಂಕಾ ಪಡೆ ಎಲ್ಲಾ ವಿಕೆಟ್ ಗಳ ನಷ್ಟಕ್ಕೆ 10 ರನ್ ಗಳಿಸಿತು. ಬೂಮ್ರಾ ಜತೆಗೆ ಮೊಹಮ್ಮದ್ ಶಮಿ, ಆರ್. ಅಶ್ವಿನ್ ತಲಾ 2 ವಿಕೆಟ್, ಅಕ್ಷರ್ ಪಟೇಲ್ ಒಂದು ವಿಕೆಟ್ ಪಡೆದರು.
ಟೀಂ ಇಂಡಿಯಾ ಎರಡನೇ ಇನ್ನಿಂಗ್ಸ್ ಪ್ರಾರಂಭಿಸಿದ್ದು, 10 ಓವರ್ ಗಳಲ್ಲಿ 37 ರನ್ ಗಳಿಸಿದೆ.