ಹೊಸದಿಗಂತ ಡಿಜಿಟಲ್ ಡೆಸ್ಕ್
ಟೀಂ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ ಫಿಟ್ನೆಸ್ ಸಮಸ್ಯೆಯಿಂದ ಬಳಲುತ್ತಿದ್ದು, 2022ರ ಸೆಪ್ಟೆಂಬರ್‌ನಿಂದ ಕ್ರಿಕೆಟ್‌ನಿಂದ ದೂರವೇ ಉಳಿದಿದ್ದಾರೆ.
ಇದರಿಂದ ಟೀಮ್ ಇಂಡಿಯಾಗೆ ಬಹುದೊಡ್ಡ ಹೊಡೆತ ಬಿದ್ದಿತ್ತು. ಆದರೆ ಇದೀಗ ಚೇತರಿಸಿಕೊಳ್ಳುವತ್ತ ಬುಮ್ರಾ ದಿಟ್ಟ ಹೆಜ್ಜೆಯಿಟ್ಟಿದ್ದಾರೆ.
Never easy, but always worth it 💪 pic.twitter.com/aJhz7jCsxQ
— Jasprit Bumrah (@Jaspritbumrah93) November 25, 2022
ಸದ್ಯ ಜಸ್ಪ್ರೀತ್ ಬುಮ್ರಾ, ಬೆಂಗಳೂರಿನಲ್ಲಿರುವ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ಪುನಶ್ಚೇತನ ಶಿಬಿರದಲ್ಲಿ ಪಾಲ್ಗೊಂಡಿದ್ದಾರೆ. ಅಭ್ಯಾಸ ನಡೆಸುತ್ತಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ಸದ್ಯದಲ್ಲಿಯೇ ಸ್ಪರ್ಧಾತ್ಮಕ ಕ್ರಿಕೆಟ್‌ಗೆ ಕಮ್‌ಬ್ಯಾಕ್ ಮಾಡುವ ಸುಳಿವು ನೀಡಿದ್ದಾರೆ.
28 ವರ್ಷದ ಬಲಗೈ ವೇಗಿ ಬುಮ್ರಾ, ಟೀಂ ಇಂಡಿಯಾ ಮೂರು ಮಾದರಿಯ ಪ್ರಮುಖ ವೇಗಿಯಾಗಿ ಗುರುತಿಸಿಕೊಂಡಿದ್ದಾರೆ. ಸದ್ಯ ಬುಮ್ರಾ ಇನ್ನೂ ಪುನಶ್ಚೇತನ ಶಿಬಿರದಲ್ಲಿಯೇ ಚೇತರಿಸಿಕೊಳ್ಳುತ್ತಿದ್ದು, ಬಿಸಿಸಿಐ ಇದುವರೆಗೂ ಯಾವುದೇ ಅಧಿಕೃತ ಮಾಹಿತಿ ಬಿಟ್ಟುಕೊಟ್ಟಿಲ್ಲ.
ಜಸ್ಪ್ರೀತ್ ಬುಮ್ರಾ, ಕಸರತ್ತು ನಡೆಸುತ್ತಿರುವ ವಿಡಿಯೋದಲ್ಲಿ ಸುಲಭವೇನಲ್ಲ ಆದರೆ ಯಾವಾಗಲೂ ತುಂಬಾ ಒಳ್ಳೆಯದ್ದಿದು ಎಂದು ಕ್ಯಾಪ್ಶನ್ ನೀಡಿದ್ದಾರೆ.