ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಲಿವುಡ್ ನಟ ಸನ್ನಿ ಡಿಯೋಲ್ ನಟನೆಯ ‘ಜಾಟ್’ ಸಿನಿಮಾಗೆ ಕಾನೂನು ಸಂಕಷ್ಟ ಎದುರಾಗಿದೆ. ಈ ಚಿತ್ರದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂಬ ಆರೋಪದ ಮೇರೆಗೆ ಸನ್ನಿ ಡಿಯೋಲ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ‘ಜಾಟ್’ ಚಿತ್ರತಂಡದ ಮೇಲೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆ ಭಾರತೀಯ ನ್ಯಾಯ ಸಂಹಿತಾ 299ರ ಸೆಕ್ಷನ್ ಅಡಿಯಲ್ಲಿ ನಟ ಸನ್ನಿ ಡಿಯೋಲ್, ರಣದೀಪ್ ಹೂಡಾ., ವಿನೀತ್ ಕುಮಾರ್ ಸಿಂಗ್, ಡೈರೆಕ್ಟರ್ ಗೋಪಿಚಂದ್ ಮಲಿನೇನಿ, ನಿರ್ಮಾಪಕರಾದ ಟಿ.ಜಿ ವಿಶ್ವ ಪ್ರಸಾದ್, ನವೀನ್ ಯೆರ್ನೇನಿ, ವೈ ರವಿಶಂಕರ್ ವಿರುದ್ಧ ಜಲಂಧರ್ ಠಾಣೆ ಪೊಲೀಸರು ಎಫ್‌ಐಆರ್ ದಾಖಲಿಸಲಿಸಿದ್ದಾರೆ.
ಈ ಚಿತ್ರದ ಒಂದು ದೃಶ್ಯವು ಇಡೀ ಕ್ರಿಶ್ಚಿಯನ್ ಸಮುದಾಯದ ಧಾರ್ಮಿಕ ಭಾವನೆಗಳಿಗೆ ತೀವ್ರ ನೋವುಂಟು ಮಾಡಿದೆ ಎಂದು ನೀಡಿರುವ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಯೇಸುಕ್ರಿಸ್ತನ ಬಗ್ಗೆ ಅಗೌರವ ತೋರಿಸಲಾಗಿದೆ ಎಂದು ದೂರುದಾರರು ಆರೋಪಿಸಿದ್ದಾರೆ.