ಹೊಸದಿಗಂತ ಡಿಜಿಟಲ್ ಡೆಸ್ಕ್:
ಸ್ಟಾರ್ ಜಾವೆಲಿನ್ ಎಸೆತಗಾರ, ಒಲಿಂಪಿಕ್ಸ್ ಎರಡು ಪದಕಗಳ ವಿಜೇತ ನೀರಜ್ ಚೋಪ್ರಾ ಅವರಿಗೆ ಭಾರತೀಯ ಸೇನೆಯಲ್ಲಿ ಬಡ್ತಿ ಸಿಕ್ಕಿದೆ.
ಚೋಪ್ರಾ ಅವರನ್ನು ಪ್ರಾದೇಶಿಕ ಸೇನೆಯಲ್ಲಿ ಲೆಫ್ಟಿನೆಂಟ್ ಕರ್ನಲ್ ಆಗಿ ನೇಮಿಸಲಾಗಿದೆ. ರಕ್ಷಣಾ ಸಚಿವಾಲಯವು ಭಾರತ ಸರ್ಕಾರದ ಅಧಿಕೃತ ವಾರಪತ್ರಿಕೆಯಾದ ಭಾರತ ಗೆಜೆಟ್‌ನಲ್ಲಿ ಈ ಮಾಹಿತಿ ಪ್ರಕಟಿಸಿದೆ.
ನೀರಜ್ ಚೋಪ್ರಾ ಅವರ ಹೊಸ ಹುದ್ದೆಯು 2025ರ ಏಪ್ರಿಲ್ 16 ರಂದು ಜಾರಿಗೆ ಬಂದಿದೆ. ಇದಕ್ಕೂ ಮೊದಲು ಅವರು ಸೇನೆಯಲ್ಲಿ ಸುಬೇದಾರ್ ಹುದ್ದೆಯನ್ನು ಅಲಂಕರಿಸಿದ್ದರು. ಇದೀಗ ಅಗ್ರ ದರ್ಜೆಯ ಹುದ್ದಗೆ ಬಡ್ತಿಯನ್ನು ಪಡೆದಿದ್ದಾರೆ.
ನೀರಜ್ ಚೋಪ್ರಾ ಅವರ ಒಲಿಂಪಿಕ್ಸ್‌ನಲ್ಲಿ ಸಾಧನೆಯ ಬಳಿಕ ಭಾರತದಲ್ಲಿ ಜಾವೆಲಿನ್ ಥ್ರೋ ಹೆಚ್ಚಿನ ಪ್ರಾಶಸ್ತ್ಯವನ್ನು ಪಡೆದುಕೊಂಡಿದೆ. 2020ರ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ನೀರಜ್ ಚೋಪ್ರಾ ಜಾವೆಲಿನ್ ಥ್ರೋನಲ್ಲಿ ಚಿನ್ನದ ಪದಕ ಗೆದ್ದು ಭಾರತದ ಕೀರ್ತಿ ಪತಾಕೆಯನ್ನು ಹಾರಿಸಿದ್ದರು. ಅಂದಿನಿಂದ, ಅವರು ಇಡೀ ದೇಶಕ್ಕೆ ಪರಿಚಿತರಾಗಿದ್ದಾರೆ. ಅವರು 2024ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕವನ್ನೂ ಕೂಡ ಗೆದ್ದಿದ್ದಾರೆ.