ಹೊಸದಿಗಂತ ಡಿಜಿಟಲ್ ಡೆಸ್ಕ್:
ಜವಾಹರ ನವೋದಯ ವಿದ್ಯಾಲಯಗಳಿಗೆ 2024-25ನೇ ಶೈಕ್ಷಣಿಕ ಸಾಲಿಗೆ 6ನೇ ತರಗತಿ ಪ್ರವೇಶಾತಿಗೆ ಅನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ಆಗಸ್ಟ್ 17ರ ವರೆಗೆ ವಿಸ್ತರಿಸಲಾಗಿದೆ.
5ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ www.navodaya.gov.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
2024ರ ಜನವರಿ 20 ರಂದು ನಡೆಯುವ ಪ್ರವೇಶ ಪರೀಕ್ಷೆಯ ಮೂಲಕ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುವುದು ಎಂದು ನವೋದಯ ವಿದ್ಯಾಲಯ ಸಮಿತಿಯು ಪ್ರಕಟಣೆಯಲ್ಲಿ ತಿಳಿಸಿದೆ.