ಜವಾಹರಲಾಲ್ ನೆಹರು ಪುಣ್ಯತಿಥಿ : ಪ್ರಧಾನಿ ಮೋದಿ ಸೇರಿ ಗಣ್ಯರಿಂದ ನಮನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂದು ಭಾರತದ ಮೊದಲ ಪ್ರಧಾನಿ ಜವಾಹರ್‌ಲಾಲ್ ನೆಹರು ಅವರ 59ನೇ ಪುಣ್ಯತಿಥಿ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗಾಂಧಿ ಸೇರಿದಂತೆ ಹಲವು ಗಣ್ಯರು ನಮನ ಸಲ್ಲಿಸಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಸೇರಿದಂತೆ ಗಣ್ಯರು ದೆಹಲಿಯ ಶಾಂತಿವನದಲ್ಲಿರುವ ನೆಹರು ಸ್ಮಾರಕಕ್ಕೆ ಭೇಟಿ ನೀಡಿ ಪುಷ್ಪನಮನ ಸಲ್ಲಿಸಿದರು. ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದು, ಪಂಡಿತ್ ಜವಾಹರ್‌ಲಾಲ್ ನೆಹರು ಅವರ ಪುಣ್ಯತಿಥಿಯಂದು ಅವರಿಗೆ ನಮನಗಳು ಎಂದಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಟ್ವೀಟ್ ಮಾಡಿದ್ದು, ನೆಹರು ಅವರ ಕೊಡುಗೆಯಿಲ್ಲದೆ 21 ನೇ ಶತಮಾನದಲ್ಲಿ ಭಾರತವನ್ನು ಕಲ್ಪಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಪ್ರಜಾಪ್ರಭುತ್ವದ ನಿರ್ಭೀತ ಕಾವಲುಗಾರರಾಗಿದ್ದ ಅವರ ಪ್ರಗತಿಪರ ಆಲೋಚನೆಗಳು ಸವಾಲುಗಳ ನಡುವೆಯೂ ಭಾರತದ ಸಾಮಾಜಿಕ, ರಾಜಕೀಯ ಮತ್ತು ಆರ್ಥಿಕ ಅಭಿವೃದ್ಧಿಯನ್ನು ಬಲವಾಗಿ ಮುನ್ನಡೆಸಿದವು. ನೆಹರು ಅವರಿಗೆ ನನ್ನ ನಮನಗಳು ಎಂದು ಹೇಳಿದ್ದಾರೆ.

https://twitter.com/ANI/status/1662283424965754881?s=20

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!