ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರ 60 ನೇ ಪುಣ್ಯತಿಥಿಯಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಗೌರವ ನಮನ ಅರ್ಪಿಸಿದ್ದಾರೆ.
ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಕಾಂಗ್ರೆಸ್ ನಾಯಕರು ಪುಷ್ಪ ನಮನ ಸಲ್ಲಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಎಕ್ಸ್ ಖಾತೆಯಲ್ಲಿ, ಮಾಜಿ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರ ಪುಣ್ಯತಿಥಿಯಂದು ಅವರಿಗೆ ಗೌರವ ಸಲ್ಲಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಇದಕ್ಕೂ ಮುನ್ನ ನೆಹರೂ ಅವರ ಪುಣ್ಯತಿಥಿಯಂದು ಕಾಂಗ್ರೆಸ್ ನಾಯಕರು ಪುಷ್ಪ ನಮನ ಸಲ್ಲಿಸಿದರು. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಸೇರಿದಂತೆ ಹಲವು ಗಣ್ಯರು ರಾಷ್ಟ್ರ ರಾಜಧಾನಿಯಲ್ಲಿನ ಅವರ ಸ್ಮಾರಕ ಶಾಂತಿವನಕ್ಕೆ ತೆರಳಿ ಪುಷ್ಪ ನಮನ ಸಲ್ಲಿಸಿದರು.
I pay homage to former PM Pandit Jawaharlal Nehru Ji on his death anniversary.
— Narendra Modi (@narendramodi) May 27, 2024