ಹೊಸದಿಗಂತ ಡಿಜಿಟಲ್ ಡೆಸ್ಕ್:
BCCI ಕಾರ್ಯದರ್ಶಿ ಜಯ್ ಶಾ ಮೂರನೇ ಬಾರಿಗೆ ಏಷ್ಯನ್ ಕ್ರಿಕೆಟ್ ಮಂಡಳಿಯ ಅಧ್ಯಕ್ಷರಾಗಿ (ACC) ಆಯ್ಕೆಯಾಗಿದ್ದಾರೆ.
ಬಾಲಿಯಲ್ಲಿ ನಡೆದ ACC ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಸರ್ವಾನುಮತದಿಂದ ನಿರ್ಣಯ ಕೈಗೊಳ್ಳಲಾಗಿದೆ.
ಲಂಕಾ ಕ್ರಿಕೆಟ್ (SLC) ಅಧ್ಯಕ್ಷ ಶಮ್ಮಿ ಸಿಲ್ವಾ ಅವರು ಎರಡನೇ ಬಾರಿಗೆ ಜಯ್ ಶಾ ಅವರ ಅಧಿಕಾರಾವಧಿಯ ವಿಸ್ತರಣೆಯನ್ನು ಪ್ರಸ್ತಾಪಿಸಿದ್ದಾರೆ. ನಾಮನಿರ್ದೇಶನವನ್ನು ACCಯ ಎಲ್ಲಾ ಸದಸ್ಯರು ಸರ್ವಾನುಮತದಿಂದ ಬೆಂಬಲಿಸಿದ್ದಾರೆ. ಇದರೊಂದಿಗೆ ಜಯ್ ಶಾ ಮೂರನೇ ಬಾರಿ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಅಧ್ಯಕ್ಷರಾಗಿ ಆಯ್ಕೆಯಾದಂತಾಗಿದೆ.
ಜನವರಿ 2021 ರಲ್ಲಿ ಜಯ್ ಶಾ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯ ಅಧ್ಯಕ್ಷರಾದ ನಜ್ಮುಲ್ ಹಸನ್ ಅವರಿಂದ ಎಸಿಸಿಯ ಆಡಳಿತವನ್ನು ವಹಿಸಿಕೊಂಡಿದ್ದರು. ಇದಾದ ಬಳಿಕ ಅವರನ್ನು 2 ಬಾರಿ ಮರು ನೇಮಕ ಮಾಡಲಾಗಿದೆ.