ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷವು ಜಯಾ ಬಚ್ಚನ್ ಅವರನ್ನು ಮತ್ತೆ ಕಣಕ್ಕೆ ಇಳಿಸಿದೆ. ಜಯಾ ಅವರು ಉತ್ತರ ಪ್ರದೇಶ ವಿಧಾನಸಭೆಯಿಂದ ರಾಜ್ಯಸಭೆಗೆ ಮರು ಆಯ್ಕೆ ಕೋರಿ ಮಂಗಳವಾರ ನಾಮಪತ್ರ ಸಲ್ಲಿಸಿದ್ದಾರೆ.
ಜಯಾ ಜೊತೆ ಮಾಜಿ ಸಂಸದ ರಾಮ್‌ಜಿಲಾಲ್ ಸುಮನ್ ಮತ್ತು ನಿವೃತ್ತ ಐಎಎಸ್ ಅಧಿಕಾರಿ ಅಲೋಕ್ ರಂಜನ್ ಅವರನ್ನೂ ಉತ್ತರ ಪ್ರದೇಶ ವಿಧಾನಸಭೆಯಿಂದ ಕಣಕ್ಕೆ ಇಳಿಸಿದೆ.
ಜಯಾ ಅವರು ಈಗ ನಾಲ್ಕನೆಯ ಬಾರಿಗೆ ರಾಜ್ಯಸಭೆಯ ಸದಸ್ಯರಾಗಿದ್ದಾರೆ. ಐದನೆಯ ಅವಧಿಗೆ ಆಯ್ಕೆ ಕೋರಿ ನಾಮಪತ್ರ ಸಲ್ಲಿಸಲಿದ್ದಾರೆ.