ಹುಬ್ಬಳ್ಳಿಯಲ್ಲಿ ಜಯದೇವ ಹೃದ್ಯೋಗ ಆಸ್ಪತ್ರೆಗೆ ಬರುವ ತಿಂಗಳು ಅಡಿಗಲ್ಲು: ಸಿಎಂ ಬೊಮ್ಮಾಯಿ

ಹೊಸದಿಗಂತ ವರದಿ, ಹಾವೇರಿ

ಹುಬ್ಬಳ್ಳಿಯಲ್ಲಿ ಜಯದೇವ ಹೃದ್ಯೋಗ ಆಸ್ಪತ್ರೆಗೆ ಬರುವ ತಿಂಗಳು ಅಡಿಗಲ್ಲು ಮಾಡಿ ಕಟ್ಟಡ ನಿರ್ಮಾಣಕ್ಕೆ ಚಾಲನೆ ನೀಡಲಾಗುವುದು. ಒಂದು ಕೋಟಿಗೂ ಹೆಚ್ಚು ಜನತೆಗೆ ಆಯುಷ್ಮಾನ ಕಾರ್ಡ್‌ಗಳನ್ನು ಇದೇ ವರ್ಷ ನೀಡಲಾಗುತ್ತಿದೆ. ಜನರ ಸಮಸ್ಯೆಗಳನ್ನು ಅರಿತುಕೊಂಡು ಅವರಿಗೆ ಸ್ಪಂದಿಸುವ ಕೆಲಸವನ್ನು ರಾಜ್ಯ ಬಿಜೆಪಿ ಸರ್ಕಾರ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಭಾನುವಾರ ಜಿಲ್ಲೆಯ ಶಿಗ್ಗಾವಿ ಪಟ್ಟಣದ ತಾಲೂಕಾ ಆಸ್ಪತ್ರೆಯನ್ನು ೨೫೦ ಹಾಸಿಗೆ ಆಸ್ಪತ್ರೆಗೆ ಮೇಲ್ದರ್ಜೆಗೆ ಸೇರಿಸುವ ಕಾರ್ಯಕ್ಕೆ ಶಂಕು ಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಜಯದೇವ ಹೃದ್ಯೋಗ ಆಸ್ಪತ್ರೆಯನ್ನು ೩೬೦ ಕೋಟಿ ರೂಗಳ ವೆಚ್ಚ ಮಾಡಲಾಗುತ್ತಿದೆ. ಇದು ಪ್ರಾರಂಭವಾದರೆ ಈ ಭಾಗದವರಾರು ಆಪರೇಷನ್ ಹಾಗೂ ಚಿಕಿತ್ಸೆಗಾಗಿ ಬೆಂಗಳೂರಿಗೆ ಹೋಗುವ ಅವಷ್ಯಕತೆ ಬರುವುದಿಲ್ಲ. ಕ್ಯಾನ್ಸ್‌ರ್ ಖಾಯಿಲೆಗೆ ಸಂಬಂಧಿಸಿದಂತೆ ಬೆಳಗಾವಿಯಲ್ಲಿ ಕಿದ್ವಾಯಿ ಆಸ್ಪತ್ರೆಯ ಪ್ರಮುಖ ಘಟಕವನ್ನು ಆರಂಭಿಸಲಾಗುವುದು ಎಂದರು.
ಈ ವರ್ಷ ರಾಜ್ಯ ಬಿಜೆಪಿ ಸರ್ಕಾರ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡಿದೆ. ಎಲ್ಲಲ್ಲಿ ಜನ ಸಂಖ್ಯೆ ಹೆಚ್ಚಾಗಿದೆಯೋ ಅಂತಹ ತಾಲೂಕಾ ಆಸ್ಪತ್ರೆಗಳನ್ನು ಮೇಲ್ದರ್ಜೆಗೆ ಏರಿಸುವುದಕ್ಕೆ ಯೋಜನೆಯನ್ನು ರೂಪಿಸಲಾಗುತ್ತಿದೆ. ಸುಮಾರು ೧೦೦ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಂದ ಸಮುದಾಯ ಆರೋಗ್ಯ ಕೇಂದ್ರಗಳಾಗಿ ಮೇಲ್ದರ್ಜೆಗೆ ಏರಿಸುವುದಕ್ಕೆ ಇದೇ ವರ್ಷ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.
ರಾಜ್ಯದಲ್ಲಿ ಬಹಳ ವರ್ಷಗಳಿಂದ ನೂತನ ಪಿಹೆಚ್‌ಸಿ ಕೇಂದ್ರಗಳನ್ನು ತೆರೆದಿರಲಿಲ್ಲ ಹಾಗೂ ಈ ಆಸ್ಪತ್ರೆಗಳನ್ನು ಮೇಲ್ದರ್ಜೆಗೆ ಏರಿಸುವುದಕ್ಕೂ ಕ್ರಮ ಕೈಗೊಂಡಿರಲಿಲ್ಲ ಆದರೆ ನಮ್ಮ ಸರ್ಕಾರ ನೂತನ ೬೦ ಪಿಹೆಚ್‌ಸಿ ಕೇಂದ್ರಗಳನ್ನು ಪ್ರಾರಂಭಿಸಲು ಕ್ರಮ ಕೈಗೊಂಡಿದೆ. ಹಾಗೂ ಆಸ್ಪತ್ರೆಗಳನ್ನು ಮೇಲ್ದರ್ಜೆಗೆ ಏರಿಸುವುದಕ್ಕೂ ಕ್ರಮ ಕೈಗೊಂಡಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ ನೂತನ ೧೨ ಕ್ಯಾನ್ಸರ್ ಚಿಕಿತ್ಸಾ ಆಸ್ಪತ್ರೆಗಳನ್ನು ಪ್ರಾರಂಭಿಸಲಾಗುತ್ತಿದೆ. ಇದರಿಂದ ಹಿಮೋಥೆರ್ಪಿ ಚಿಕಿತ್ಸೆ ಮಾಡುವುದು ಇಗಿರುವುದಕ್ಕಿಂತ ಎರಡು ಪಟ್ಟು ಹೆಚ್ಚಾಗಲಿದೆ. ಇದೇ ಡಿಸೆಂಬರದಿಂದ ೪೩೦ ನಮ್ಮ ಕ್ಲಿನಿಕ್‌ಗಳನ್ನು ಪ್ರಾರಂಭಿಸಲಾಗುತ್ತಿದೆ. ೬೦ ವರ್ಷ ಮೇಲ್ಪಟ್ಟವರೆಲ್ಲರ ಕಣ್ಣಿನ ತಪಾಸಣೆ ಮಾಡಿ ಅವರಿಗೆ ಚಸ್ಮಾ ನೀಡುವ ವಿನೂತನ ಯೋಜನೆಯನ್ನು ಪ್ರಾರಂಭಿಸಲಾಗುತ್ತಿz. ಹುಟ್ಟು ಕಿವುಡರಿಗೆ ಕಾಪಿಯರಿಂ ಪ್ಲಾಂಟ್ ಮಾಡುವುದಕ್ಕೆ ೫-೮ ಲಕ್ಷ ವೆಚ್ಚ ತಗಲುತ್ತದೆ ಅದನ್ನು ಇದೇ ವರ್ಷದಿಂದ ಪ್ರಾರಂಭಿಸಲಾಗಿದೆ. ಅದಕ್ಕಾಗಿ ೫೦೦ ಕೋಟಿ ರೂಗಳನ್ನು ಆಯವ್ಯದಲ್ಲಿ ತಗೆದಿರಿಸಲಾಗಿದೆ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!