ಕೆಸಿಜಿ ಆಸ್ಪತ್ರೆಯಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆ ಘಟಕ ಉದ್ಘಾಟಿಸಿದ ಸಿಎಂ ಬಸವರಾಜ್ ಬೊಮ್ಮಾಯಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು ಮಹಾನಗರದ ನಾಲ್ಕು ದಿಕ್ಕುಗಳಲ್ಲೂ ನಾಲ್ಕು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಸ್ಥಾಪಿಸಲಾಗುತ್ತಿದೆ. ಜೊತೆಗೆ 243 ವಾರ್ಡ್​ಗಳಲ್ಲೂ ‘ನಮ್ಮ ಕ್ಲಿನಿಕ್’ ಆಸ್ಪತ್ರೆಗಳನ್ನು ನವೆಂಬರ್ ಹೊತ್ತಿಗೆ ಸ್ಥಾಪಿಸಲಾಗುತ್ತದೆ. ನಗರದಲ್ಲಿ 20 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೆ ಏರಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ತಿಳಿಸಿದ್ದಾರೆ.
ಮಲ್ಲೇಶ್ವರಂನಲ್ಲಿ ಇರುವ ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ಹಾಗೂ ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆ ವತಿಯಿಂದ ನಿರ್ಮಿಸಿರುವ ತಲಾ 50 ಹಾಸಿಗೆಗಳ ಸಾಮರ್ಥ್ಯದ ಘಟಕಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಿ ಮಾಹಿತಿ ನೀಡಿದರು.
ಕೆ ಸಿ ಜನರಲ್ ಆಸ್ಪತ್ರೆಯ ಆವರಣದಲ್ಲಿ 200 ಹಾಸಿಗೆಗಳ ತಾಯಿ ಮತ್ತು ಮಕ್ಕಳ ಆಸ್ಪತ್ರೆ (ಎಂಸಿಎಚ್) ಮತ್ತು 50 ಹಾಸಿಗೆಗಳ ಟ್ರಾಮಾ ಕೇರ್ ಸೆಂಟರ್ ಸ್ಥಾಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು .
ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಮಾತನಾಡಿ, ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ಜಯದೇವ ಹೃದ್ರೋಗ ಸಂಸ್ಥೆ ಮತ್ತು ಇಂದಿರಾ ಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಗಳು ತಲಾ 50 ಹಾಸಿಗೆಗಳ ಘಟಕಗಳನ್ನು ಸ್ಥಾಪಿಸಿರುವುದರಿಂದ ಬೆಂಗಳೂರು ನಗರದ ಉತ್ತರ ಭಾಗದ ಜನರಿಗೆ ಅನುಕೂಲ ಆಗಲಿದೆ ಎಂದರು.
ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಮಾತನಾಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!