April 12, 2026
Sunday, April 12, 2026
spot_img

ಜಯನಗರ-ಆರ್.ವಿ. ರಸ್ತೆ ‘ನಮ್ಮ ಮೆಟ್ರೋ’ ರೈಲುಗಳ ವೇಗಕ್ಕೆ ಬ್ರೇಕ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಿಲಿಕಾನ್ ಸಿಟಿಯ ‘ನಮ್ಮ ಮೆಟ್ರೋ’ ಹಸಿರು ಮಾರ್ಗದ ಆರ್.ವಿ. ರಸ್ತೆ ಮತ್ತು ಜಯನಗರ ಮೆಟ್ರೋ ನಿಲ್ದಾಣಗಳ ನಡುವಿನ ರೈಲು ಸಂಚಾರದ ವೇಗದಲ್ಲಿ ತಾತ್ಕಾಲಿಕ ಬದಲಾವಣೆ ಮಾಡಲಾಗಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ತಿಳಿಸಿದೆ.

(Green Line) ಸಂಚರಿಸುವ ಪ್ರಯಾಣಿಕರಿಗೆ ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ಮಹತ್ವದ ಮಾಹಿತಿಯೊಂದನ್ನು ನೀಡಿದೆ. ಆರ್.ವಿ. ರಸ್ತೆ ಮತ್ತು ಜಯನಗರ

ಮೆಟ್ರೋ ಮಾರ್ಗದ ದೀರ್ಘಕಾಲೀನ ಸುರಕ್ಷತೆ ಮತ್ತು ವಿಶ್ವಾಸಾರ್ಹತೆಯನ್ನು ಕಾಪಾಡಿಕೊಳ್ಳುವ ಉದ್ದೇಶದಿಂದ ಆರ್.ವಿ. ರಸ್ತೆ ಮತ್ತು ಜಯನಗರ ನಿಲ್ದಾಣಗಳ ನಡುವಿನ ಒಂದು ನಿರ್ದಿಷ್ಟ ಭಾಗದಲ್ಲಿ ಸಪೋರ್ಟ್ ಬೇರಿಂಗ್‌ಗಳನ್ನು ಬದಲಾಯಿಸುವ ನಿರ್ವಹಣಾ ಕಾಮಗಾರಿ ನಡೆಯುತ್ತಿದೆ. ಈ ತಾಂತ್ರಿಕ ಕೆಲಸವು ಅತ್ಯಂತ ಸೂಕ್ಷ್ಮವಾಗಿದ್ದು, ರೈಲುಗಳ ಸಂಚಾರದ ವೇಳೆ ಹಳಿಗಳ ಮೇಲಿನ ಒತ್ತಡವನ್ನು ಕಡಿಮೆ ಮಾಡಲು ವೇಗ ನಿಯಂತ್ರಣ ಅತ್ಯಗತ್ಯವಾಗಿದೆ ಎಂದು ತಿಳಿಸಿದೆ.

ಆರ್.ವಿ. ರಸ್ತೆ ಮತ್ತು ಜಯನಗರ ನಿಲ್ದಾಣಗಳ ನಡುವಿನ ವಲಯದಲ್ಲಿ ರೈಲುಗಳು ನಿಧಾನವಾಗಿ ಚಲಿಸಲಿವೆ. ಇದರಿಂದಾಗಿ ಈ ಭಾಗದಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ನಿಗದಿತ ಸಮಯಕ್ಕಿಂತ ಕೆಲವು ನಿಮಿಷಗಳಷ್ಟು ಹೆಚ್ಚುವರಿ ಪ್ರಯಾಣ ಸಮಯ ತಗುಲಬಹುದು. ಪ್ರಯಾಣಿಕರು ತಮ್ಮ ಕೆಲಸಗಳಿಗೆ ತೆರಳುವಾಗ ಈ ವಿಳಂಬವನ್ನು ಗಮನದಲ್ಲಿಟ್ಟುಕೊಂಡು ಸ್ವಲ್ಪ ಮುಂಚಿತವಾಗಿ ಪ್ರಯಾಣ ಆರಂಭಿಸುವುದು ಉತ್ತಮಎಂದು ಮಾಹಿತಿ ನೀಡಿದೆ. .

ಸುರಕ್ಷತೆ ಮತ್ತು ಕಾರ್ಯಾಚರಣಾ ವಿಶ್ವಾಸಾರ್ಹತೆಯ ಅತ್ಯುನ್ನತ ಮಾನದಂಡಗಳನ್ನು ಕಾಯ್ದುಕೊಂಡು, ಈ ನಿರ್ವಹಣಾ ಕಾಮಗಾರಿಯನ್ನು ಶೀಘ್ರದಲ್ಲಿ ಪೂರ್ಣಗೊಳಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ನಿಗಮ ಭರವಸೆ ನೀಡಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !