ಜಯಂತ್​ ಚಿನ್ನುಮರಿಗೆ ಕೂಡಿ ಬಂತು ಕಂಕಣ ಭಾಗ್ಯ: ಮದುವೆ ಡೇಟ್ ಫಿಕ್ಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕನ್ನಡ ಕಿರುತೆರೆಯಲ್ಲೇ ಲಕ್ಷ್ಮೀ ನಿವಾಸ ಧಾರಾವಾಹಿ ಮೂಲಕ ಸೀರಿಯಲ್​ ಪ್ರಿಯರ ಮನಸ್ಸು ಗೆದ್ದಿರೋ ನಟಿ ಚಂದನಾ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ.

ಉದ್ಯಮಿ ಪ್ರತ್ಯಕ್ಷ್ ಎಂಬುವವರ ಜೊತೆ ಹಸೆಮಣೆ ಏರಲು ನಟಿ ಸಜ್ಜಾಗಿದ್ದಾರೆ.

ಕಿರುತೆರೆಯಲ್ಲಿ ಚಿನ್ನುಮರಿ ಅಲಿಯಾಸ್ ಜಾಹ್ನವಿ ಪಾತ್ರದಲ್ಲಿ ಮೋಡಿ ಮಾಡುತ್ತಿರುವ ಚಂದನಾ ಇದೀಗ ಹೊಸ ಬಾಳಿಗೆ ಕಾಲಿಡಲು ರೆಡಿಯಾಗಿದ್ದಾರೆ. ಕುಟುಂಬಸ್ಥರು ನಿಶ್ಚಯಿಸಿದ ಮದುವೆ ಇದಾಗಿದ್ದು, ಉದ್ಯಮಿ ಪ್ರತ್ಯಕ್ಷ್ ಜೊತೆ ಇದೇ ನವೆಂಬರ್ 28ಕ್ಕೆ ಬೆಂಗಳೂರಿನಲ್ಲಿ ಚಂದನಾ ಮದುವೆ ಜರುಗಲಿದೆ. ಈ ಮದುವೆಯಲ್ಲಿ ಕುಟುಂಬಸ್ಥರು, ಆಪ್ತರು, ಕಿರುತೆರೆಯ ಕಲಾವಿದರು ಭಾಗಿಯಾಗಲಿದ್ದಾರೆ.

ಇನ್ನೂ ರಾಜ ರಾಣಿ, ಹೂ ಮಳೆ, ಬಿಗ್ ಬಾಸ್ ಕನ್ನಡ ಸೀಸನ್ 7 ಶೋ ಸೇರಿದಂತೆ ಹಲವು ಪ್ರಾಜೆಕ್ಟ್‌ಗಳಲ್ಲಿ ಚಂದನಾ ಕಾಣಿಸಿಕೊಂಡಿದ್ದಾರೆ. ಪ್ರಸ್ತುತ ‘ಲಕ್ಷ್ಮಿ ನಿವಾಸ’ ಸೀರಿಯಲ್‌ನಲ್ಲಿ ಜಾಹ್ನವಿ ಪಾತ್ರದ ಮೂಲಕ ಅಭಿಮಾನಿಗಳ ಮನಗೆದ್ದಿದ್ದಾರೆ.

ಇನ್ನೂ ಪ್ರತ್ಯಕ್ಷ್ ಅವರು ಉದ್ಯಮಿಯಾಗಿದ್ದಾರೆ. ವಿಶೇಷ ಅಂದರೆ, ಪ್ರತ್ಯಕ್ಷ್ ಪೋಷಕರು ಕೂಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ದಿವಂಗತ ಉದಯ್ ಹುತ್ತಿನಗದ್ದೆ ಅವರು ಡಾ.ರಾಜ್‌ಕುಮಾರ್ ಜೊತೆ ‘ದೇವತಾ ಮನುಷ್ಯ’ ಚಿತ್ರದಲ್ಲಿ ನಟಿಸಿದ್ದರು. ‘ಆರಂಭ’, ‘ಅಗ್ನಿಪರ್ವ’, ‘ಶುಭ ಮಿಲನ’ ಸೇರಿದಂತೆ ಹಲವು ಸಿನಿಮಾಗಳಲ್ಲಿ ಅವರು ನಟಿಸಿದರು. ಅವರ ಪತ್ನಿ ಲಲಿತಾಂಜಲಿ ಉದಯ್ ಕೂಡ ಹಿರಿತೆರೆ, ಕಿರುತೆರೆಯಲ್ಲಿ ಸಕ್ರಿಯರಾಗಿದ್ದಾರೆ

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!