ಗೌತಮ್‌ ಗಂಭೀರ್‌ ಸರದಿಯಲ್ಲಿ ಜಯಂತ್‌ ಸಿನ್ಹಾ: ಚುನಾವಣೆಗೆ ಸ್ಪರ್ಧಿಸದಿರಲು ನಿರ್ಧಾರ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಿಜೆಪಿಯ ಸಂಸದ ಗೌತಮ್‌ ಗಂಭೀರ್‌ ಅವರು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಣಕ್ಕಿಳಿಯದಿರಲು ನಿರ್ಧರಿಸಿದ್ದು, ಇದರ ಬೆನ್ನಲ್ಲೇ ಜಯಂತ್‌ ಸಿನ್ಹಾ ಕೂಡ ಸ್ಪರ್ಧಿಸದಿರಲು ನಿರ್ಧರಿಸಿದ್ದಾರೆ.

ಈ ಸಂಬಂಧ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.‍ಪಿ. ನಡ್ಡಾ ಅವರಿಗೆ ಪತ್ರ ಬರೆದಿದ್ದು, ಅಭ್ಯರ್ಥಿಗಳ ಪಟ್ಟಿಯಿಂದ ತಮ್ಮ ಹೆಸರು ಕೈಬಿಡುವಂತೆ ಮನವಿ ಮಾಡಿದ್ದಾರೆ.

ಜಾರ್ಖಂಡ್‌ನ ಹಜಾರಿಬಾಗ್‌ ಲೋಕಸಭಾ ಕ್ಷೇತ್ರ ಪ್ರತಿನಿಧಿಸುವ ಜಯಂತ್‌ ಸಿನ್ಹಾ, ‘ನೇರ ಚುನಾವಣಾ ಕರ್ತವ್ಯದಿಂದ ತಮ್ಮನ್ನು ಮುಕ್ತಗೊಳಿಸುವಂತೆ ಜೆ.ಪಿ. ನಡ್ಡಾ ಅವರಿಗೆ ಮನವಿ ಮಾಡಿದ್ದೇನೆ. ಪಕ್ಷದ ಆರ್ಥಿಕ ಮತ್ತು ಆಡಳಿತಾತ್ಮಕ ವಿಷಯಗಳಲ್ಲಿ ಕೆಲಸ ಮುಂದುವರಿಸುವೆ’ ಎಂದು ಶನಿವಾರ ಸಾಮಾಜಿಕ ಮಾಧ್ಯಮ ‘ಎಕ್ಸ್‌’ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ಮಾಜಿ ಕೇಂದ್ರ ಸಚಿವರೂ ಆದ ಜಯಂತ್‌ ಸಿನ್ಹಾ ‘ಭಾರತವು ಸೇರಿ ವಿಶ್ವದಾದ್ಯಂತ ಜಾಗತಿಕ ಹವಾಮಾನ ಬದಲಾವಣೆ ಎದುರಿಸುವ ನಿಟ್ಟಿನಲ್ಲಿ ತನ್ನ ಪ್ರಯತ್ನಗಳ ಮೇಲೆ ಗಮನ ಕೇಂದ್ರೀಕರಿಸಲು ಬಯಸಿದ್ದೇನೆ’ ಎಂದೂ ಹೇಳಿದ್ದಾರೆ.

ಇದಕ್ಕೂ ಮೊದಲು, ಪೂರ್ವ ದೆಹಲಿ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುವ ಬಿಜೆಪಿ ಸಂಸದ, ಮಾಜಿ ಕ್ರಿಕೆಟಿಗ ಗೌತಮ್‌ ಗಂಭೀರ್‌, ‘ಕ್ರಿಕೆಟ್‌ ಸಂಬಂಧಿತ ಕೆಲಸಗಳ ಮೇಲೆ ಗಮನಕೇಂದ್ರೀಕರಿಸುವ ಸಲುವಾಗಿ ಪಕ್ಷದ ರಾಜಕೀಯ ಕರ್ತವ್ಯಗಳಿಂದ ತನ್ನನ್ನು ಮುಕ್ತಗೊಳಿಸುವಂತೆ ನಡ್ಡಾ ಅವರಿಗೆ ಮನವಿ ಮಾಡಿದ್ದೇನೆ’ ಎಂದು ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!