ಜಯಪ್ರಕಾಶ್‌ ಹೆಗ್ಡೆ, ಸುಕುಮಾರ್ ಶೆಟ್ಟಿ, ಎಂ.ಪಿ.ಕುಮಾರಸ್ವಾಮಿ ಕಾಂಗ್ರೆಸ್ ಸೇರ್ಪಡೆ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಲೋಕಸಭಾ ಚುನಾವಣೆ (Loksabha Elections 2024) ಹೊತ್ತಲ್ಲೇ ಮಾಜಿ ಸಂಸದ ಜಯಪ್ರಕಾಶ್‌ ಹೆಗ್ಡೆ(jayaprakash hegde) ಸೇರಿದಂತೆ ಇಬ್ಬರು ಮಾಜಿ ಶಾಸಕರು ಕಾಂಗ್ರೆಸ್(Congress) ಸೇರ್ಪಡೆಯಾಗಿದ್ದಾರೆ.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಡಿಕೆ ಶಿವಕುಮಾರ್​ ಸಮ್ಮುಖದಲ್ಲಿ ಮಾಜಿ ಸಂಸದ ಜಯಪ್ರಕಾಶ್‌ ಹೆಗ್ಡೆ , ಮಾಜಿ ಶಾಸಕರಾದ ಸುಕುಮಾರ್ ಶೆಟ್ಟಿ, ಮತ್ತು ಎಂ.ಪಿ.ಕುಮಾರಸ್ವಾಮಿ ಕಾಂಗ್ರೆಸ್ ಸೇರ್ಪಡೆಯಾದರು.
ಈ ಮೂಲಕ ಜಯಪ್ರಕಾಶ್‌ ಹೆಗ್ಡೆ ಅವರು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸುವ ಸಾಧ್ಯತೆಗಳು ಹೆಚ್ಚಿವೆ.

ಕಾಂಗ್ರೆಸ್ ಸೇರ್ಪಡೆ ಬಳಿಕ ಮಾತನಾಡಿದ ಜಯಪ್ರಕಾಶ್ ಹೆಗ್ಡೆ, ಹಿಂದಿನ ಕೆಲ ಕಹಿ ಘಟನೆಗಳನ್ನ ಬಿಟ್ಟು, ಸಿಹಿ ಘಟನೆಗಳ ಜೊತೆಗೆ ಮುಂದುವರೆಯಬೇಕು. ಅದಕ್ಕೆ ನಾನು ಬಂದಿದ್ದೇನೆ, ಸರ್ಕಾರದ ಗ್ಯಾರಂಟಿ ಯೋಜನೆಗಳನ್ನ ಮನೆ ಮನೆಗೆ ಹೋಗಿ ನೆನಪು ಮಾಡಿಕೊಡಬೇಕು ಎಂದು ಹೇಳಿದೆ ಎಂದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!