ಹೊಸದಿಗಂತ ವರದಿ, ಕಲಬುರಗಿ:
ಜಿಲ್ಲೆಯಾದ್ಯಂತ ಕಳೆದ ಮೂರು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಸೇಡಂ ತಾಲೂಕಿನ ಮಳಖೇಡದಲ್ಲಿರುವ ಜಯತೀರ್ಥರ ಮೂಲ ಬೃಂದಾವನ ಜಲಾವೃತಗೊಂಡಿದೆ.
ಸೇಡಂ ತಾಲೂಕಿನ ಮಳಖೇಡನ ಮಠದ ಪಕ್ಕದಲ್ಲೇ ಕಾಗಿಣಾ ನದಿಯಿದ್ದು,ಯಾವುದೇ ಸಮಯದಲ್ಲಾದರೂ ತುಂಬಿ ಹರಿಯುವ ಸಾಧ್ಯತೆಯಿದೆ. ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮಠಕ್ಕೆ ನೀರು ನುಗ್ಗಿದೆ.
ಭಾರಿ ಮಳೆಯಿಂದಾಗಿ ಹಲವು ಗ್ರಾಮಗಳ ರಸ್ತೆಗಳು ಜಲಾವೃತಗೊಂಡಿದ್ದು, ರಸ್ತೆ ಸಂಪರ್ಕ ಕಡಿತಗೊಂಡಿದೆ. ಇದರಿಂದಾಗಿ ಗ್ರಾಮದಿಂದ ಗ್ರಾಮಕ್ಕೆ ಬರುವ ಪ್ರಯಾಣಿಕರು ಮತ್ತು ಸಾರ್ವಜನಿಕರು ಪರದಾಡುವಂತಹ ಸ್ಥಿತಿ ಎದುರಾಗಿದೆ.