Friday, February 23, 2024

ಜಯವರ್ಧನೆ ದಾಖಲೆ ಉಡೀಸ್: ವಿಶ್ವದಾಖಲೆ ನಿರ್ಮಿಸಿದ ಕಿಂಗ್ ಕೊಹ್ಲಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿಂದು ಬಾಂಗ್ಲಾದೇಶ ವಿರುದ್ಧ ವಿರಾಟ್ ಕೊಹ್ಲಿ ವಿಶ್ವದಾಖಲೆ ನಿರ್ಮಿಸಿದ್ದಾರೆ.

ಅಡಿಲೇಡ್ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ವಿರಾಟ್ ಕೊಹ್ಲಿ 16 ರನ್‌ ಬಾರಿಸುತ್ತಿದ್ದಂತೆಯೇ ವಿಶ್ವಕಪ್ ಟೂರ್ನಿಯಲ್ಲಿ ಗರಿಷ್ಠ ರನ್ ಬಾರಿಸಿದ ಬ್ಯಾಟರ್ ಎನ್ನುವ ವಿಶ್ವದಾಖಲೆಯನ್ನುನಿರ್ಮಿಸಿದರು.

ಈ ಮೊದಲು ಶ್ರೀಲಂಕಾದ ಮಾಜಿ ನಾಯಕ ಮಹೆಲಾ ಜಯವರ್ಧನೆ ಟಿ20 ವಿಶ್ವಕಪ್ ಟೂರ್ನಿಯಲ್ಲಿ 1,016 ರನ್ ಬಾರಿಸುವ ಮೂಲಕ ಮೊದಲ ಸ್ಥಾನದಲ್ಲಿದ್ದರು. ಆದರೆ ಇದೀಗ ಜಯವರ್ಧನೆ ದಾಖಲೆ ಹಿಂದಿಕ್ಕಿ ಕಿಂಗ್ ಕೊಹ್ಲಿ ಅಗ್ರಸ್ಥಾನದಲ್ಲಿ ವಿರಾಜಮಾನರಾಗಿದ್ದಾರೆ.

ಟಿ20 ವಿಶ್ವಕಪ್ ಟೂರ್ನಿಯಲ್ಲಿ ಗರಿಷ್ಠ ರನ್ ಬಾರಿಸಿದ ಟಾಪ್ 05 ಬ್ಯಾಟರ್‌

1017* ವಿರಾಟ್ ಕೊಹ್ಲಿ
1016 -ಮಹೆಲಾ ಜಯವರ್ಧನೆ
965 – ಕ್ರಿಸ್ ಗೇಲ್‌
921 – ರೋಹಿತ್ ಶರ್ಮಾ
897 – ತಿಲಕರತ್ನೆ ದಿಲ್ಷ್ಯಾನ್

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!