ಹೊಸದಿಗಂತ ವರದಿ ವಿಜಯನಗರ:
ವಿಶ್ವ ಪಾರಂಪರಿಕ ತಾಣ, ಐತಿಹಾಸಿಕ ಹಂಪಿಯಲ್ಲಿ ಜೆಸಿಬಿಗಳು ಗರ್ಜಿಸುತ್ತಿವೆ. ಜಿಲ್ಲಾಡಳಿತ, ಹವಾಮಾ ಹಾಗೂ ಸ್ಥಳೀಯ ಗ್ರಾ.ಪಂ. ಅಧಿಕಾರಿಗಳು ಜಂಟಿಯಾಗಿ ಕಾರ್ಯಾಚರಣೆಗಿಳಿದಿದ್ದು, ಶ್ರೀ ಪಂಪಾ ವಿರೂಪಾಕ್ಷೇಶ್ವರ ದೇವಸ್ಥಾನ ಸಮೀಪದ ಜನತಾ ಪ್ಲಾಟ್ ನಲ್ಲಿ ಅಕ್ರಮವಾಗಿ ತಲೆ ಎತ್ತಿದ್ದ ಶೆಡ್‌ಗಳು, ಅಂಗಡಿಗಳು ಸೇರಿದಂತೆ ಹತ್ತಕ್ಕೂ ಹೆಚ್ಚು ಕಟ್ಡಡಗಳ ತೆರವುಗೊಳಿಸುವ ಕಾರ್ಯ ಆರಂಭವಾಗಿದೆ.
ಜನತಾ ಪ್ಲಾಟ್ ಪ್ರದೇಶದಲ್ಲಿನ ಹೋಂ ಸ್ಟೇಗಳನ್ನು ಹೈಕೋರ್ಟ್ ಆದೇಶದ ಮೇರೆಗೆ ಈಗಾಗಲೇ ಕೆಲವು ಅಂಗಡಿಗಳನ್ನು ಮುಚ್ಚಿಸಲಾಗಿತ್ತು. ಆದರೆ, ಕೆಲವು ಕಡೆ ನಿಗದಿತ ಸ್ಥಳಕ್ಕಿಂತ ಹೆಚ್ಚುವರಿ ಸ್ಥಳವನ್ನು ಆಕ್ರಮಿಸಿಕೊಂಡು ಶೆಡ್, ಅಂಗಡಿ ನಿರ್ಮಿಸಿಕೊಂಡಿದ್ದು ಗಮನಕ್ಕೆ ಬಂದಿತ್ತು. ಜುಲೈ 11 ರಂದು ನಡೆದಿದ್ದ ಪ್ರಾಧಿಕಾರದ ಸಭೆಯಲ್ಲಿ ಇಂತಹ ಅಕ್ರಮ ಕಟ್ಟಡಗಳನ್ನು ತೆರವುಗೊಳಿಸುವ ನಿಟ್ಟಿನಲ್ಲಿ ನಿರ್ಣಯ ಕೈಗೊಳ್ಳಲಾಗಿತ್ತು.