April 28, 2026
Tuesday, April 28, 2026
spot_img

GBA ಚುನಾವಣೆ ನಡೆಸುವಂತೆ ರಾಜ್ಯಪಾಲರಿಗೆ ಜೆಡಿಎಸ್ ಮನವಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸ್ಥಳೀಯ ಸಂಸ್ಥೆಗಳಲ್ಲಿ ಜನಪ್ರತಿನಿಧಿಗಳ ಕೊರತೆಯಿಂದ ಸಾರ್ವಜನಿಕ ಸಮಸ್ಯೆಗಳು ಹೆಚ್ಚುತ್ತಿವೆ ಎಂದು ಆರೋಪಿಸಿರುವ ಜನತಾ ದಳ (ಸೆಕ್ಯುಲರ್) ಕಾನೂನು ಘಟಕ, ಜಿಬಿಎ ಚುನಾವಣೆ ಶೀಘ್ರ ನಡೆಸುವಂತೆ ರಾಜ್ಯಪಾಲರಿಗೆ ಮನವಿ ಸಲ್ಲಿಸಿದೆ.

ಜೆಡಿಎಸ್ ಕಾನೂನು ಘಟಕದ ಅಧ್ಯಕ್ಷ ಎ.ಪಿ. ರಂಗನಾಥ್ ನೇತೃತ್ವದಲ್ಲಿ ರಾಜ್ಯಪಾಲರಿಗೆ ದೂರು ನೀಡಲಾಗಿದ್ದು, ಸರ್ಕಾರಕ್ಕೆ ಅಗತ್ಯ ಸೂಚನೆ ನೀಡಿ ಚುನಾವಣಾ ಪ್ರಕ್ರಿಯೆ ಆರಂಭಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಗಿದೆ.

ಇದನ್ನೂ ಓದಿ:

ನ್ಯಾಯಾಲಯದ ನಿರ್ದೇಶನಗಳಿದ್ದರೂ ಸರ್ಕಾರ ಉದ್ದೇಶಪೂರ್ವಕವಾಗಿ ಚುನಾವಣೆ ಮುಂದೂಡುತ್ತಿದೆ ಎಂದು ರಂಗನಾಥ್ ಆರೋಪಿಸಿದರು. ಜನರ ಸಮಸ್ಯೆಗಳಿಗೆ ಸ್ಪಂದಿಸಲು ಸ್ಥಳೀಯ ಮಟ್ಟದಲ್ಲಿ ಜನಪ್ರತಿನಿಧಿಗಳ ಅಗತ್ಯವಿದೆ ಎಂದು ಅವರು ಅಭಿಪ್ರಾಯಪಟ್ಟರು.

ಈ ವಿಚಾರವಾಗಿ ಈಗಾಗಲೇ ಮುಖ್ಯ ಚುನಾವಣಾ ಆಯುಕ್ತರ ಗಮನಕ್ಕೂ ವಿಷಯ ತರಲಾಗಿದೆ. ರಾಜ್ಯಪಾಲರು ಈ ಬೆಳವಣಿಗೆಯ ಬಗ್ಗೆ ಸೂಕ್ತ ವರದಿ ಸಲ್ಲಿಸಿ, ಚುನಾವಣೆ ನಡೆಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ ಎಂದು ಜೆಡಿಎಸ್ ತಿಳಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !