ಹೊಸದಿಗಂತ ಡಿಜಿಟಲ್ ಡೆಸ್ಕ್:
ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಬೆನ್ನಲ್ಲೇ ಇದೀಗ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಮನೆಗೆ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಭೇಟಿ ನೀಡಿದ್ದಾರೆ.
ಬೆಂಗಳೂರಿನಲ್ಲಿರುವ ಕುಮಾರಸ್ವಾಮಿ ನಿವಾಸಕ್ಕೆ ತೆರಳಿ ಮಾತನಾಡಿದ್ದು, ಎಚ್‌ಡಿಕೆ ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ.
ನಾನು ಮನೆಯಲ್ಲಿ ಪೂಜೆ ಮಾಡಿಸುತ್ತಿದೆ. ಈ ವೇಳೆ ಎಚ್‌ಡಿಕೆ ಕರೆ ಮಾಡಿ ಮೈತ್ರಿ ಬಗ್ಗೆ ಮಾತನಾಡಿದ್ದರು, ಎಲ್ಲವೂ ಒಳ್ಳೆಯದಾಗುತ್ತದೆ ಎಂದು ಹೇಳಿದ್ದೆ. ಜನರು ಮೈತ್ರಿ ಬಗ್ಗೆ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಸೀಟ್ ಬಗ್ಗೆ ಕೇಂದ್ರ ನಾಯಕರ ತೀರ್ಮಾನವೇ ಅಂತಿಮ ಎಂದು ಮಾಧ್ಯಮಕ್ಕೆ ಈಶ್ವರಪ್ಪ ಹೇಳಿದ್ದಾರೆ.