ನಾಲ್ಕೂವರೆ ವರ್ಷಗಳ ಬಳಿಕ ಜೆಡಿಎಸ್-ಬಿಜೆಪಿ ಅಭ್ಯರ್ಥಿಗಳ ಸಂಗಮ: ಪರಸ್ಪರ ಭೇಟಿ, ಮಾತುಕತೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸುಮಾರು ನಾಲ್ಕೂವರೆ ವರ್ಷಗಳ ಬಳಿಕ ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್-ಬಿಜೆಪಿ ಅಭ್ಯರ್ಥಿಗಳಾದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ಎಚ್.ವಿಶ್ವನಾಥ್ ಪರಸ್ಪರ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಕೆ.ಆರ್.ನಗರದಲ್ಲಿರುವ ವಿಶ್ವನಾಥ್ ನಿವಾಸಕ್ಕೆ ಶನಿವಾರ ಭೇಟಿ ನೀಡಿದ ಕುಮಾರಸ್ವಾಮಿ, ವಿಶ್ವನಾಥ್ ಅವರೊಂದಿಗೆ ಮನಃಪೂರ್ವಕವಾಗಿ ಮಾತನಾಡಿದರು.

ಬಳಿಕ ಪತ್ರಿಕಾಗೋಷ್ಠಿ ನಡೆಸಿದ ಅವರು, ರಾಜಕೀಯ ನಿಂತ ನೀರಲ್ಲ, ಇದು ಸದಾ ಹರಿಯುವ ಗಂಗೆ. ಈ ಹಿಂದೆ ನನ್ನ, ಕುಮಾರಸ್ವಾಮಿ ಹಾಗೂ ಸಾ.ರಾ.ಮಹೇಶ್ ನಡುವೆ ಕೆಲ ವಿಚಾರಗಳಿಗೆ ತೀವ್ರ ವಾಗ್ವಾದ ನಡೆದಿದೆ.

ಈಗ ನಾವು ದೇಶ ಮತ್ತು ಜನರ ಒಳಿತಿಗಾಗಿ ಕೆಲಸ ಮಾಡಬೇಕಾಗಿದ್ದು, ಎಲ್ಲರೂ ಸಣ್ಣ ಪುಟ್ಟ ಭಿನ್ನಾಭಿಪ್ರಾಯಗಳನ್ನು ಸರಿಪಡಿಸಿಕೊಂಡು ಮುಂದುವರಿಯಬೇಕು. ಕುಮಾರಸ್ವಾಮಿ ಗೆಲುವಿಗೆ ಶ್ರಮಿಸುತ್ತೇನೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!