Wednesday, November 29, 2023

Latest Posts

ಪ್ರಧಾನಿಯಾಗಿ ಮತ್ತೊಮ್ಮೆ ಮೋದಿ: ಜೆಡಿಎಸ್-ಬಿಜೆಪಿ ಒಟ್ಟಾಗಿ ಹೋಗುವ ನಿರ್ಣಯ-ಜಿಟಿಡಿ

ಹೊಸದಿಗಂತ ವರದಿ ವಿಜಯಪುರ:

ಮುಂದಿನ ದಿನಗಳಲ್ಲೂ ಪ್ರಧಾನಿ ನರೇಂದ್ರ ಮೋದಿ ನಾಯಕತ್ವ ದೇಶಕ್ಕೆ ಅವಶ್ಯವಾಗಿದ್ದು, ಅವರನ್ನು ಮತ್ತೆ ಪ್ರಧಾನಿಯನ್ನಾಗಿ ಮಾಡುವ ನಿಟ್ಟಿನಲ್ಲಿ ಬಿಜೆಪಿ ಜೊತೆ ಒಟ್ಟಾಗಿ ಹೋಗುವ ನಿರ್ಣಯ ಮಾಡಲಾಗಿದೆ ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿ.ಎಂ.ಇಬ್ರಾಹಿಂ ಜೆಡಿಎಸ್ ಬಿಡೋದಿಲ್ಲ. ಬಿಜೆಪಿ ಜೊತೆಗೆ ಹೋಗಲು ಇಬ್ರಾಹಿಂ ಅವರಿಂದ ಯಾವುದೇ ವಿರೋಧವಿಲ್ಲ. ಅವರೇ ಮುಂದೆ ನಿಂತು ನನ್ನ ಅಧ್ಯಕ್ಷ ಸ್ಥಾನ ಘೋಷಣೆ ಮಾಡಿದ್ದಾರೆ, ಅದನ್ನು ನೀವೆ ನೋಡಿದ್ದೀರಿ. ಸಿ.ಎಂ ಇಬ್ರಾಹಿಂರದ್ದು ಈಗ ಏನು ಚರ್ಚೆ ಇಲ್ಲ. ಮುಂದೆ ಒಟ್ಟಾಗಿ ಹೇಗೆ ಹೋಗಬೇಕು ಅನ್ನೋದು ಇಬ್ರಾಹಿಂ ಸಲಹೆಯಿದ್ದು, ದೊಡ್ಡಗೌಡರ ಜೊತೆಗೇ ಚರ್ಚೆ ಮಾಡಿದ್ದಾರೆ ಎಂದರು.

ಶಾಸಕರ ಅನುದಾನ ಕಡಿತ, ಪ್ರತಿಭಟನೆ ವಿಚಾರಕ್ಕೆ ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅವರು, ಈಗಾಗಲೇ ಶಾಸಕ ರಾಜು ಕಾಗೆ ಹಾಗೂ ಬಿ.ಆರ್.ಪಾಟೀಲ ತಮ್ಮ ಅಸಮಧಾನ ಹೊರ ಹಾಕಿದ್ದಾರೆ ಎಂದರು.

ಭೀಕರವಾದ ಬರಗಾದಲ್ಲೂ ಸರ್ಕಾರ ರೈತರ ಕಡೆಗೆ ನೋಡುತ್ತಿಲ್ಲ. ರೈತರಿಗೆ ನೀಡಬೇಕಾದ ಅನುದಾನ ನೀಡುತ್ತಿಲ್ಲ. ರಾಜ್ಯದಲ್ಲಿ ಸರ್ಕಾರ ಇದೆ ಅನಿಸುತ್ತಿಲ್ಲ. ಕಾಂಗ್ರೆಸ್ ಸರ್ಕಾರದಲ್ಲಿ ರಾಜ್ಯದ ಜನರಿಗೆ ಕೊರಗು ಉಂಟಾಗಿದೆ. ಕಾಂಗ್ರೆಸ್ ತಂದು ತಪ್ಪು ಮಾಡಿದ್ದೇವೆ ಎಂದು ಜನರಿಗೆ ಮನದಟ್ಟಾಗಿದೆ. ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ತೆಗೆಯಬೇಕಿದೆ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!