ಹೊಸದಿಗಂತ ಡಿಜಿಟಲ್ ಡೆಸ್ಕ್:
ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ಒಂದೇ ನಾಣ್ಯದ ಎರಡು ಮುಖಗಳಂತೆ ಕೆಲಸ ಮಾಡಿದ್ದಾರೆ. ಎಂದು ತುಮಕೂರು ಸಂಸದ ವಿ.ಸೋಮಣ್ಣ ತಿಳಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತುಮಕೂರು ಕ್ಷೇತ್ರದಲ್ಲಿ ಬಿಜೆಪಿಗಿಂತ ಜೆಡಿಎಸ್ ಹೆಚ್ಚಿನ ಕೆಲಸ ಮಾಡಿದೆ. ದೇವೇಗೌಡ, ಕುಮಾರಸ್ವಾಮಿ ನಾಲ್ಕೈದು ಬಾರಿ ಬಂದು ನನಗೆ ದೊಡ್ಡ ಶಕ್ತಿ ಕೊಟ್ಟಿದ್ದಾರೆ. ಅವರಿಗೆ ನಾನು ಯಾವತ್ತು ಖುಣಿಯಾಗಿದ್ದೇನೆ ಎಂದು ಅವರು ಹೇಳಿದರು.
ಜೆಡಿಎಸ್ ಮತ್ತು ಬಿಜೆಪಿ ನಡುವಿನ ಈ ಹೊಂದಾಣಿಕೆ ಮುಂದಿನ ದಿನಗಳಲ್ಲಿಯೂ ರಾಜ್ಯದಲ್ಲಿ ಮುಂದುವರಿಯಲಿದೆ. ಈ ನಿಟ್ಟಿನಲ್ಲಿ ಪ್ರಯತ್ನ ನಡೆದಿದೆ. ಹನ್ನೊಂದು ತಿಂಗಳು ಒಂದು ರೀತಿಯ ವನವಾಸ. ಸದಾ ದುಡಿಯುವವನಿಗೆ ಕೆಲಸವೇ ಇಲ್ಲದಂತಾಗಿತ್ತು. ಈಗ ಮುಕ್ತಿ ದೊರೆಯುತ್ತಿದೆ ಎಂದರು.