ಇಂದು ಜೆಡಿಎಸ್‌ನ ಕೋರ್ ಕಮಿಟಿ ಸಭೆ: ಪ್ರಜ್ವಲ್ ರೇವಣ್ಣ ಉಚ್ಚಾಟನೆ ಕುರಿತು ಮಹತ್ವದ ಚರ್ಚೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂದು ಜೆಡಿಎಸ್ ಕೋರ್ ಕಮಿಟಿ ಸಭೆ ನಡೆಯಲಿದ್ದು, ಸಂಸದ ಪ್ರಜ್ವಲ್ ರೇವಣ್ಣ ಉಚ್ಚಾಟನೆ ಕುರಿತು ಮಹತ್ವದ ಚರ್ಚೆ ನಡೆಯುವ ಸಾಧ್ಯತೆ ಇದೆ.

ಕೋರ್ ಕಮಿಟಿ ಅಧ್ಯಕ್ಷ ಜಿಟಿ ದೇವೇಗೌಡ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಸಭೆ ನಡೆಯಲಿದೆ.

ಪಕ್ಷದ ನಾಯಕರ ಆದೇಶದ ಮೇರೆಗೆ ಈಗಾಗಲೇ ಪ್ರಜ್ವಲ್ ರೇವಣ್ಣ ಅವರನ್ನು ಅಧಿಕಾರದಿಂದ ಕೆಳಗಿಳಿಸಲಾಗಿದೆ. ಪಕ್ಷಕ್ಕೆ ಆಗುವ ಮುಜುಗರ ತಪ್ಪಿಸಲು ಸಭೆಯಲ್ಲ ಉಚ್ಚಾಟನೆ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ.

ಪ್ರಧಾನಿ ನರೇಂದ್ರ ಮೋದಿ ಅವರು ಪ್ರಜ್ವಲ್ ಗೆ ಕಠಿಣ ಶಿಕ್ಷೆ ವಿಧಿಸಲು ಮುಂದಾಗಿರುವ ಬೆನ್ನಲ್ಲೇ ಪ್ರಜ್ವಲ್ ಉಚ್ಚಾಟನೆ ಬಗ್ಗೆ ಭಾರೀ ಚರ್ಚೆ ನಡೆದಿದೆ. ಹೊರಹಾಕುವುದು ಅನಿವಾರ್ಯ. ಆದಾಗ್ಯೂ, ಫಲಿತಾಂಶ ಮುಂಚೆಯೋ ಅಥವಾ ನಂತರವೋ ಎನ್ನುವುದು ಕುತೂಹಲ ಮೂಡಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

1 COMMENT

  1. Tappumadidavarige shikshe agabeku yella hennumakkla sheela onde nimma maneya hennmakklu adru onde bere hennmakklu adrueonde hennumakkla ge naya odigisikodi

LEAVE A REPLY

Please enter your comment!
Please enter your name here

error: Content is protected !!