ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರ ಜನ್ಮದಿನದ ಸಂದರ್ಭದಲ್ಲಿ ಬೃಹತ್ ಸಮಾವೇಶವನ್ನು ಆಯೋಜಿಸಲು ಜೆಡಿಎಸ್ ನಿರ್ಧರಿಸಿದೆ.
ಲಕ್ಷಾಂತರ ಜನರನ್ನು ಸೇರಿಸಿ ‘ದೇವೇಗೌಡೋತ್ಸವ’ ಆಚರಿಸಲು ನಿರ್ಧರಿಸಲಾಗಿದೆ. ಇದು ಹಾಸನದಲ್ಲಿ ಕಾಂಗ್ರೆಸ್ ಪಕ್ಷವು ನಡೆಸಿದ ಸಮಾವೇಶಕ್ಕಿಂತ ದೊಡ್ಡದಾಗಿರಲಿದೆ.
ದೇವೇಗೌಡೋತ್ಸವ’ ಬೃಹತ್ ಸಮಾವೇಶದ ಮೂಲಕ ಶಕ್ತಿಯನ್ನು ಪ್ರದರ್ಶಿಸುವುದರ ಜತೆಗೆ, ಹಳೆ ಮೈಸೂರು ಪ್ರದೇಶದಲ್ಲಿ ನೆಲೆಯಲ್ಲಿ ಗಟ್ಟಿಗೊಳಿಸುವುದು ಪಕ್ಷದ ನಾಯಕರ ಉದ್ದೇಶವಾಗಿದೆ.