ಪ್ರಧಾನಿ ಮೋದಿ ಕೈಗೊಳ್ಳುವ ಯಾವುದೇ ತೀರ್ಮಾನಕ್ಕೆ ಜೆಡಿಎಸ್ ಸಂಪೂರ್ಣ ಬೆಂಬಲ: ಹೆಚ್. ಡಿ. ದೇವೇಗೌಡ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಹಲ್ಗಾಮ್ ದಾಳಿಯ ಪ್ರತೀಕಾರವಾಗಿ ಪ್ರಧಾನಿ ಮೋದಿ ಕೈಗೊಳ್ಳುವ ಯಾವುದೇ ತೀರ್ಮಾನಕ್ಕೆ ಜೆಡಿಎಸ್ ಪಕ್ಷದ ಸಂಪೂರ್ಣ ಬೆಂಬಲವಿದೆ ಎಂದು ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡ ಸೋಮವಾರ ಹೇಳಿದ್ದಾರೆ.

ಹಾಸನ ದಲ್ಲಿ ಮಾತನಾಡಿದ ಅವರು, ಕಾಶ್ಮೀರದಲ್ಲಿ ಪ್ರವಾಸಿಗರನ್ನು ಕಗ್ಗೊಲೆ ಮಾಡಿದ ಉಗ್ರರ ವಿರುದ್ಧ ಪ್ರಧಾನಿ ದೃಢ ನಿರ್ಧಾರ ಕೈಗೊಂಡಿದ್ದಾರೆ. ಕಾಶ್ಮೀರದಲ್ಲಿ ಉಪಟಳ ನೀಡುತ್ತಿರುವ ಉಗ್ರರು ಎಲ್ಲೇ ಅಡಗಿದ್ದರೂ ಹೊರಗೆಳೆದು ಶಿಕ್ಷಿಸುವರೆಗೂ ಬಿಡುವುದಿಲ್ಲ ಎಂದು ಪ್ರಧಾನಿ ಘೋಷಿಸಿದ್ದಾರೆ. ಯಾವುದೇ ಕ್ರಮ ಕೈಗೊಳ್ಳಲು ಸೇನೆಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದಾರೆ. ಉಗ್ರರನ್ನು ಸದೆಬಡಿಯಲು ಪ್ರಧಾನಿಗೆ ನಮ್ಮ ಬೆಂಬಲವಿದೆ ಎಂದರು.

 

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!