ವಿಧಾನಸಭಾ ಚುನಾವಣೆಗೆ ಜೆಡಿಎಸ್‌ ಸಂಪೂರ್ಣ ಸಿದ್ಧಗೊಂಡಿದೆ: ಎಚ್.ಡಿ.ಕುಮಾರಸ್ವಾಮಿ

ಹೊಸದಿಗಂತ ವರದಿ, ರಾಮನಗರ
ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ರಾಜ್ಯಕ್ಕೆ ಮಾಡಿರುವ ಅನ್ಯಾಯಗಳ ಬಗ್ಗೆ ಹೋರಾಟ ನಡೆಸುತ್ತೇನೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ರಾಮನಗರದಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಕ್ಕೆ ಅಮಿತ್ ಶಾ – ರಾಹುಲ್ ಗಾಂಧಿ ಭೇಟಿ ವಿಚಾರವಾಗಿ ಪ್ರತಿಕ್ರಿಯಿಸಿದರು.
ಕರ್ನಾಟಕದಲ್ಲಿ ಚುನಾವಣಾ ವರ್ಷ ಪ್ರಾರಂಭವಾಗಿದೆ. ಇನ್ಮುಂದೆ ರಾಷ್ಟ್ರೀಯ ಪಕ್ಷಗಳ ನಾಯಕರು ಪ್ರತಿದಿನ ಲಗ್ಗೆಯಿಟ್ಟು ಮತ ಪಡೆಯಲು ಪ್ರಾರಂಭ ಮಾಡುತ್ತಾರೆ ಎಂದರು.
ಮೊದಲು ನಮ್ಮ ರಾಜ್ಯದ ನದಿ ನೀರಿನ ಸಮಸ್ಯೆ ಬಗೆಹರಿಸಿಕೊಂಡು ಬಂದು ಮತ ಕೇಳಲಿ. ಆ ನಿಟ್ಟಿನಲ್ಲಿ ರಾಷ್ಟ್ರೀಯ ಪಕ್ಷಗಳ ನಾಯಕರು ಕೆಲಸ ಮಾಡಲಿ ಎಂದರು.
ವಿಧಾನಸಭೆಯಲ್ಲಿ ಹಲಾಲ್ ವಿಚಾರ ಚರ್ಚೆಗೆ ಬಂದಿಲ್ಲ, ಬಂದರೆ ಚರ್ಚೆ ಮಾಡಬಹುದು. ಇವತ್ತು ಚುನಾವಣಾ ಸುಧಾರಣಾ ಬಗ್ಗೆ ಚರ್ಚೆಯಿದೆ. ಅಲ್ಲಿ ಅವಕಾಶ ಸಿಕ್ಕರೆ ಸಮಾಜದಲ್ಲಿ ಶಾಂತಿ ತರುವ ವಿಚಾರವಾಗಿ ಸಲಹೆ ಕೊಡುತ್ತೇನೆ ಎಂದರು.
ಚುನಾವಣೆಗೆ ನಾವು ಸಿದ್ದ: 
ಗುಜರಾತ್ ಜೊತೆಗೆ ಕರ್ನಾಟಕದಲ್ಲಿಯೂ ಚುನಾವಣೆ ನಡೆಯಬಹುದು ಎಂದು ಅಭಿಪ್ರಾಯಪಟ್ಟ ಎಚ್.ಡಿ.ಕೆ, ಮುಂದಿನ ಏಪ್ರಿಲ್ ನಲ್ಲಿಯೂ ಘೋಷಣೆಯಾಗಬಹುದಾದ ಸಾಧ್ಯತೆಗಳಿಗೆ. ಚುನಾವಣೆಗೆ ನಾವು ಸಂಪೂರ್ಣ ಸಿದ್ಧರಿದ್ದೇವೆ ಎಂದು ತಿಳಿಸಿದರು.
ಮುಂದಿನ 10 ನೇ ತಾರೀಖಿನಿಂದ ಜೆಡಿಎಸ್ ಪಕ್ಷದ ಸಂಘಟನೆ ಪ್ರಾರಂಭ ಆಗಲಿದೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ನಮ್ಮದು ಅಕ್ರಮ ಆಸ್ತಿ ಅಲ್ಲ: ನಾವು ಅಕ್ರಮ ಮಾಡಿಲ್ಲ, ಅಕ್ರಮವಾಗಿ ಅಸ್ತಿಯೂ ಸಂಪಾದಿಸಿಲ್ಲ. ನಾವೇಕೆ ನೊಟೀಸ್ ಗೆ ತಲೆಕೆಡಿಸಿಕೊಳ್ಳಬೇಕು ಎಂದರು. ಇಡಿ ಮತ್ತು ಸಿಬಿಐ ಬಿಜೆಪಿಯ ಅಂಗ ಪಕ್ಷಗಳು. ಅವುಗಳು ನಮ್ಮ ಕುಟುಂಬಕ್ಕೆ ಏನು ಮಾಡಲು ಸಾಧ್ಯವಿಲ್ಲ ಎಂದು ವಾಗ್ದಾಳಿ ನಡೆಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!