ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಒಕ್ಕೂಟಕ್ಕೆ ಜೆಡಿಎಸ್ (JDS) ಅಧಿಕೃತವಾಗಿ ಸೇರ್ಪಡೆಯಾಗಿದೆ.
ಚುನಾವಣೆಗೆ ಸೀಟು ಹಂಚಿಕೆ ವಿಚಾರವಾಗಿ ಇಂದು ಗೃಹ ಸಚಿವ ಅಮಿತ್ ಶಾ (Amit Shah) ನಿವಾಸಕ್ಕೆ ತೆರಳಿ ಮಾಜಿ ಸಿಎಂ ಕುಮಾರಸ್ವಾಮಿ (Kumaraswamy) ಬಿಜೆಪಿ, ಜೆಡಿಎಸ್ ಮೈತ್ರಿ ಮಾತುಕತೆ ನಡೆಸಿದ್ದಾರೆ.
ಸಭೆಯ ನಂತರ ಮಾತನಾಡಿದ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ,’ಜೆಡಿಎಸ್ ಎನ್‌ಡಿಎಗೆ ಸೇರ್ಪಡೆಯಾಗಿದೆ. ಗೃಹ ಸಚಿವ ಅಮಿತ್ ಶಾ ಅವರ ಸಮ್ಮುಖದಲ್ಲಿ ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾದೆ. ನಾವು ಅವರನ್ನು ಎನ್‌ಡಿಎಗೆ ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇವೆ’ ಎಂದರು.
ಈ ಮೈತ್ರಿ ಪ್ರಧಾನಿ ನರೇಂದ್ರ ಮೋದಿಯವರ ನವ ಭಾರತ, ಬಲವಾದ ಭಾರತದ ದೃಷ್ಟಿಕೋನವನ್ನು ಮತ್ತಷ್ಟು ಬಲಪಡಿಸುತ್ತದೆ ಎಂದಿರುವ ನಡ್ಡಾ ಹೇಳಿಕೊಂಡಿದ್ದಾರೆ.