ನಂದಿನಿ ಮೊಸರು ಪ್ಯಾಕೆಟ್ ಮೇಲೆ ಹಿಂದಿ ‘ದಹಿ’ ಪದ ಬಳಕೆ: ಎಚ್‌ಡಿಕೆ ಆಕ್ರೋಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ನಂದಿನಿ ಮೊಸರಿನ ಪ್ಯಾಕೆಟ್‌ ಮೇಲೆ ‘ದಹಿ’ ಎಂದು ಮುದ್ರಿಸಿರುವುದರ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ. ಇದರ ಬೆನ್ನಲ್ಲೇ ಮೊಸರಿನ ಪ್ಯಾಕೆಟ್‌ ಮೇಲೆ ʼದಹಿʼ ಎಂಬ ಹಿಂದಿ ಪದವನ್ನು ಮುದ್ರಿಸುವಂತೆ ಭಾರತೀಯ ಆಹಾರ ಸುರಕ್ಷತೆ, ಗುಣಮಟ್ಟ ಪ್ರಾಧಿಕಾರವು ಕೆಎಂಎಫ್‌ಗೆ ಆದೇಶ ನೀಡಿದೆ. ಈ ಕುರಿತು ಮಾಜಿ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, ‘ದಹಿ’ ಪದ ಬಳಕೆಯನ್ನು ಒಪ್ಪಲು ಸಾಧ್ಯವಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ವಿಚಾರವಾಗಿ ಸರಣಿ ಟ್ವೀಟ್‌ ಮಾಡಿರುವ ಅವರು, ‘ನಂದಿನಿ ಕನ್ನಡಿಗರ ಆಸ್ತಿ, ಕನ್ನಡಿಗರ ಅಸ್ಮಿತೆ ಹಾಗೂ ಕನ್ನಡಿಗರ ಜೀವನಾಡಿ. ಇದು ಗೊತ್ತಿದ್ದರೂ ಹಿಂದಿ ಹೇರಿಕೆಯ ಅಹಂ ತೋರಲಾಗಿದೆ. ಈ ಹಿಂದೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಮಂಡ್ಯದ ಸಭೆಯೊಂದರಲ್ಲಿ, ಗುಜರಾತಿನ ಅಮುಲ್ ಜತೆ ನಂದಿನಿಯನ್ನು ವಿಲೀನ ಮಾಡುವುದಾಗಿ ಹೇಳಿದ್ದರು. ಹಿಂದಿ ಪದ ಮುದ್ರಣ ನಂದಿನಿ ಹೈಜಾಕಿನ ಆರಂಭವಾ?’ ಎಂದು ಹೆಚ್‌ಡಿಕೆ ಪ್ರಶ್ನಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!