ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಸೈಕ್ಲೋನ್ ಕಾರಣದಿಂದಾಗಿ ನಾಲ್ಕು ದಿನ ಪಂಚರತ್ನ ರಥಯಾತ್ರೆಯನ್ನು ಮುಂದೂಡಿಕೆ ಮಾಡಲಾಗಿದೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದರು.
ಈ ಬಗ್ಗೆ ಮಾಹಿತಿ ನೀಡಿರುವ ಅವರು, ಮಳೆಯ ಕಾರಣ, ಪಂಚರತ್ನ ರಥಯಾತ್ರೆಯನ್ನು 4 ದಿನ ಮುಂದೂಡಿಕೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ತುಮಕೂರು ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದೆ. ತುಮಕೂರು ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್ ಘೋಷಣೆಯನ್ನು ಹವಾಮಾನ ಇಲಾಖೆ ಮಾಡಿದೆ. ಹೀಗಾಗಿ ನಾಲ್ಕು ದಿನ ಮುಂದೂಡಿಕೆ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.