Wednesday, November 30, 2022

Latest Posts

ಜೆಡಿಎಸ್ ಪಂಚರತ್ನ ಯಾತ್ರೆ ಒಂದು ವಾರದ ಮುಂದೂಡಿಕೆ: ಕುಮಾರಸ್ವಾಮಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದ ಕೋಲಾರ ಜಿಲ್ಲೆಯಲ್ಲಿ ಭಾರೀ ಮಳೆ ಆಗುತ್ತಿದ್ದು, ಹೀಗಾಗಿ ಇಂದಿನಿಂದ ಆರಂಭವಾದ ಜೆಡಿಎಸ್ ಪಂಚರತ್ನ ಯಾತ್ರೆಯನ್ನು ಒಂದು ವಾರದ ಮಟ್ಟಿಗೆ ಮುಂದೂಡಲಾಗಿದೆ.
ಈ ಕುರಿತು ಮಾಹಿತಿ ನೀಡಿದ ಕುಮಾರಸ್ವಾಮಿ, ಮಳೆ ಬಿಡುವು ಕೊಟ್ಟ ಕೂಡಲೇ ರಥಯಾತ್ರೆಯನ್ನು ಕೂಡಲೇ ಆರಂಭ ಮಾಡಲಾಗುವುದು ಎಂದು ಹೇಳಿದ್ದಾರೆ.
ಬೆಳಗ್ಗೆಯೇ ಇತಿಹಾಸ ಪ್ರಸಿದ್ಧ ಕುರುಡುಮಲೆ ಮಹಾಗಣಪತಿ ದೇವಾಲಯದಲ್ಲಿ ಪೂಜೆ, ಹೋಮ ನೆರವೇರಿಸಿದ ನಂತರ ರಥಯಾತ್ರೆಗೆ ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೇಗೌಡರು ಹಾಗೂ ನಾನು ಚಾಲನೆ ನೀಡಿದೆವು. ಆದರೆ, ಮಳೆ ಹೆಚ್ಚಾದ ಕಾರಣಕ್ಕೆ ಬೃಹತ್ ಸಮಾವೇಶ ರಥಯಾತ್ರೆ ಹಾಗೂ ಗ್ರಾಮ ವಾಸ್ತವ್ಯವನ್ನು ಒಂದು ವಾರ ಮುಂದಕ್ಕೆ ಹಾಕಲಾಗಿದೆ ಎಂದು ಕುಮಾರಸ್ವಾಮಿ ಅವರು ತಿಳಿಸಿದರು.
ಇವತ್ತಿನ ಕಾರ್ಯಕ್ರಮಕ್ಕೆ ವರುಣನ ಸಿಂಚನ ಆಗಿದೆ. ರಭಸವಾಗಿ ಸುರಿದ ಕಾರಣ ಬಹಿರಂಗ ಸಭೆ, ರಥಯಾತ್ರೆ, ಗ್ರಾಮ ವಾಸ್ತವ್ಯವನ್ನು ಮುಂದೂಡಲಾಗಿದೆ. ಒಂದು ವಾರದ ನಂತರ ಮುಳಬಾಗಿಲು ಪಟ್ಟಣದಿಂದಲೇ ಯಾತ್ರೆ ಶುರು ಮಾಡುತ್ತೇವೆ. ಹವಾಮಾನ ಇಲಾಖೆ ಮಾಹಿತಿ ಪ್ರಕಾರ ಇನ್ನೂ ನಾಲ್ಕೈದು ದಿನಗಳು ಮಳೆ ಬರಲಿದೆ ಎಂದಿದೆ. ಹೀಗಾಗಿ ಜನರಿಗೆ ತೊಂದರೆ ಆಗದಂತೆ ಮುಂದಕ್ಕೆ ಹಾಕಿದ್ದೇವೆ ಎಂದರು.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!