Thursday, June 1, 2023

Latest Posts

ಬೆಂಗಳೂರು ನಗರಾಭಿವೃದ್ಧಿಗೆ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಿದ ಜೆಡಿಎಸ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಈಗಾಗಲೇ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ತಮ್ಮ ತಮ್ಮ ಪಕ್ಷದ ಪ್ರಣಾಳಿಕೆಗಳನ್ನು ಬಿಡುಗಡೆ ಮಾಡಿವೆ. ಪ್ರಣಾಳಿಕೆಯಲ್ಲಿ ಜನರಿಗೆ ಹಲವು ಭರವಸೆಗಳನ್ನ ನೀಡಿದ್ದು ಇದೀಗ ಜೆಡಿಎಸ್ ರಾಜ್ಯದ ರಾಜಧಾನಿ ಬೆಂಗಳೂರಿಗೆ ಪ್ರತ್ಯೇಕ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ.

ಪದ್ಮನಾಭನಗರ ನಿವಾಸದಲ್ಲಿ ರಾಷ್ಟ್ರೀಯ ಅಧ್ಯಕ್ಷ ಹೆಚ್​ಡಿ ದೇವೆಗೌಡರು ಪ್ರಣಾಳಿಕೆ ಪುಸ್ತಕವನ್ನ ಬಿಡುಗಡೆ ಮಾಡಿದ್ದಾರೆ. ಬಳಿಕ ಮಾತನಾಡಿದ ಅವರು, ಎಲ್ಲಾ ವರ್ಗಕ್ಕೂ ಅನುಕೂಲವಾಗುವ ರೀತಿಯಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡಿದ್ದೇವೆ. ಬೆಂಗಳೂರು ಸಮಗ್ರ ಅಭಿವೃದ್ಧಿಗೆ ನಾವು ಬದ‍್ಧರಾಗಿದ್ದೇವೆ . ಬೆಂಗಳೂರು ಸಾಕಷ್ಟು ಬೆಳೆದಿದೆ 1ಕೋಟಿಗೂ ಹೆಚ್ಚು ಜನ ಇಲ್ಲಿ ವಾಸವಿದ್ದಾರೆ. ಬೆಂಗಳೂರಿನ ಸಮಸ್ಯೆಗಳಿಗಿರುವ ಪರಿಹಾರದ ಬಗ್ಗೆ ಪ್ರಣಾಳಿಕೆಯಲ್ಲಿ ಪ್ರಕಟಿಸಿದ್ದೇವೆ ಎಂದರು.

ಬೆಂಗಳೂರಿನ ಅಭಿವೃದ್ಧಿಗೆ ಸಂಬಂಧಿಸಿದಂತೆ ಜೆಡಿಎಸ್​ನ ಪ್ರಣಾಳಿಕೆಯಲ್ಲಿ 8 ಭರವಸೆಗಳನ್ನು ನೀಡಲಾಗಿದೆ. ಸಾಮಾಜಿಕ ಭದ್ರತೆಗಳು ಮತ್ತು ಆರೋಗ್ಯ ಶ್ರೀರಕ್ಷೆ, ಮಹಾನಗರ ಪಾಲಿಕೆ ಆಡಳಿತ ಸುಧಾರಣೆ, ಶಿಕ್ಷಣ, ಆರೋಗ್ಯ, ಬೆಂಗಳೂರು ನಗರಕ್ಕೆ ಉತ್ತಮ ಸಾರಿಗೆ ವ್ಯವಸ್ಥೆ, ನಗರದಲ್ಲಿ ಹಸಿರಿಕರಣ ಮತ್ತು ಅರಣ್ಯೀಕರಣ, ನಗರದಲ್ಲಿನ ಕಣಿವೆ, ಕೆರೆಗಳ ಸಂರಕ್ಷಣೆ, ಕಾಲುವೆಗಳ ಪುನಶ್ಚೇತನ, ಕೋರಮಂಗಲ – ಚೆಲ್ಲಗಘಟ್ಟ ವ್ಯಾಲಿ ಏತ ನೀರಾವರಿ ಯೋಜನೆಯ ಆಧುನಿಕರಣ ಈ ಅಂಶಗಳು ಪ್ರಣಾಳಿಕೆಯಲ್ಲಿವೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!