Sunday, October 1, 2023

Latest Posts

ಜೆಡಿಎಸ್ ಹಿರಿಯ ಮುಖಂಡ ಶ್ರೀನಿವಾಸ್ ಬಿಜೆಪಿಗೆ ಸೇರ್ಪಡೆ

ಹೊಸದಿಗಂತ ವರದಿ,ಮೈಸೂರು:

ಇಲ್ಲಿನ ಚಾಮರಾಜ ವಿಧಾನಸಭಾ ಕ್ಷೇತ್ರದ ಜೆಡಿಎಸ್ ನ ಮಾಜಿ ಅಧ್ಯಕ್ಷ, ಹಿರಿಯ ಮುಖಂಡ ಶ್ರೀನಿವಾಸ್ ಅವರು ಶನಿವಾರ ಬಿಜೆಪಿಗೆ ಸೇರ್ಪಡೆಯಾದರು.
ಬಿಜೆಪಿ ಪಕ್ಷದ ತತ್ವಸಿದ್ಧಾಂತಗಳನ್ನು ಒಪ್ಪಿ ಶಾಸಕ ಎಲ್.ನಾಗೇಂದ್ರರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಗೊಂಡರು. ಅವರಿಗೆ ಪಕ್ಷದ ಭಾವುಟವನ್ನು ನೀಡುವ ಮೂಲಕ ಸ್ವಾಗತಿಸಲಾಯಿತು.
ಈ ಸಂದರ್ಭದಲ್ಲಿ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಕೆ ಸೋಮಶೇಖರ್ ರಾಜು, ನಗರ ಪ್ರಧಾನ ಕಾರ್ಯದರ್ಶಿಗಳಾದ ಹೆಚ್.ಜಿ. ಗಿರಿಧರ್, ಸೋಮ ಸುಂದರ್, ನಗರ ಪಾಲಿಕೆ ಸದಸ್ಯರುಗಳಾದ ಸುಬ್ಬಯ್ಯ, ರಂಗಸ್ವಾಮಿ, ಪ್ರಮೀಳಾ ಭರತ್, ಚಿಕ್ಕವೆಂಕಟು, ಕ್ಷೇತ್ರದ ಪ್ರಧಾನ ಕಾರ್ಯದರ್ಶಿಗಳಾದ ಪುನೀತ್, ರಮೇಶ್ ಮುಂತಾದವರಿದ್ದರು

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!