ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಹೆಸರಿಡಲು ಜೆಡಿಎಸ್ ತೀವ್ರ ವಿರೋಧ ವ್ಯಕ್ತಪಡಿಸಿದೆ.
ಸಿಎಂ ಸಿದ್ದರಾಮಯ್ಯ ಅವರೇ, ಬೆಂಗಳೂರು ವಿಶ್ವವಿದ್ಯಾಲಯ ನಿಮ್ಮ ಮನೆತನದ ಆಸ್ತಿಯಲ್ಲ ಎಂದು ಟಾಂಗ್ ಕೊಟ್ಟಿದೆ.
ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ಜೆಡಿಎಸ್, “ಸಿಎಂ ಸಿದ್ದರಾಮಯ್ಯ ಅವರೇ ಬೆಂಗಳೂರು ವಿಶ್ವವಿದ್ಯಾಲಯ ನಿಮ್ಮ ಮನೆತನದ ಆಸ್ತಿಯಲ್ಲ. ಕಾಂಗ್ರೆಸ್ ಪಕ್ಷದ ಆಸ್ತಿಯೂ ಅಲ್ಲ. ‘ಬೆಂಗಳೂರು’ ಎಂಬುದು ಈ ನೆಲಮೂಲದ ಹೆಗ್ಗುರುತು. ಸಮಸ್ತ ಕನ್ನಡಿಗರ ಹೆಮ್ಮೆ. ಹಾಗೂ ಕನ್ನಡಿಗರ ಪ್ರತಿಧ್ವನಿ. ಬೆಂಗಳೂರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಖ್ಯಾತಿ ಪಡೆದ ನಗರ. ಬೆಂಗಳೂರು ಎಂಬುದೇ ಒಂದು ವಿಶ್ವ ಪ್ರಸಿದ್ಧ ಬ್ರ್ಯಾಂಡ್” ಎಂದು ಬರೆದುಕೊಂಡಿದ್ದಾರೆ.