ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಸಿಎಂ ಯಡಿಯೂರಪ್ಪ ಸಂಬಂಧಿಯಾದ ಎನ್.ಆರ್. ಸಂತೋಷ್‌ಗೆ ಜೆಡಿಎಸ್ ಟಿಕೆಟ್ ನೀಡುವ ಚಿಂತನೆ ಮಾಡಿದೆ.
ಅರಸಿಕೆರೆಯಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಸಂತೋಷ್‌ಗೆ ಬಿಜೆಪಿ ಟಿಕೆಟ್ ಕೈ ತಪ್ಪಿತ್ತು. ಈ ಹಿನ್ನೆಲೆಯಲ್ಲಿ ಸಂತೋಷ್ ಜೆಡಿಎಸ್ ಸೇರಿದ್ದರು.
ಕಡೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಬದಲಿಸಿದಂತೆ ಇದೀಗ ಅರಸಿಕೆರೆ ಅಭ್ಯರ್ಥಿಯನ್ನೂ ಬದಲಿಸಲು ಜೆಡಿಎಸ್ ಚಿಂತನೆ ನಡೆಸಿದಂತೆ ಇದೆ. ಸಂತೋಷ್‌ಗೆ ಟಿಕೆಟ್ ನೀಡುವ ಬಗ್ಗೆ ಜೆಡಿಎಸ್ ವರಿಷ್ಠ ದೇವೇಗೌಡ ಅವರ ಬಳಿ ಚರ್ಚೆ ನಡೆದಿದ್ದು, ಶೀಘ್ರವೇ ಫಲಿತಾಂಶ ತಿಳಿದುಬರಲಿದೆ.