October 13, 2026
Tuesday, October 13, 2026
spot_img

ಬಿಡದಿ ಟೌನ್‌ಶಿಪ್‌ ವಿರೋಧಿಸಿ ಆ.9 ರಿಂದ ಜೆಡಿಎಸ್‌ ಬೃಹತ್‌ ಪಾದಯಾತ್ರೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬಿಡದಿ ಟೌನ್ ಶಿಪ್ ವಿರೋಧಿಸಿ ಜೆಡಿಎಸ್ ಪಾದಯಾತ್ರೆಗೆ ಹೊಸ ದಿನಾಂಕ ನಿಗದಿ ಮಾಡಲಾಗಿದೆ. ಹೊಸ ದಿನಾಂಕವನ್ನ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಘೋಷಣೆ ಮಾಡಿದ್ದಾರೆ.

ಚೆನ್ನಮ್ಮ ದೇವೇಗೌಡರ ನಿಧನದಿಂದ ಮುಂದೂಡಿಕೆ ಆಗಿದ್ದ ಪಾದಯಾತ್ರೆಗೆ ಈಗ ಹೊಸ ದಿನಾಂಕ ನಿಗದಿ ಮಾಡಲಾಗಿದೆ. ದೋಸ್ತಿ ಪಕ್ಷ ಬಿಜೆಪಿಯನ್ನ ದೂರವಿಟ್ಟು ಪಾದಯಾತ್ರೆ ಮಾಡಲು ಜೆಡಿಎಸ್ ತೀರ್ಮಾನ ಮಾಡಿದೆ.

ಆಗಸ್ಟ್ 9, 10, 11 ರಂದು ಪಾದಯಾತ್ರೆ ನಡೆಯಲಿದೆ. ಆಗಸ್ಟ್ 9 ರಂದು ಭೈರಮಂಗಲದಿಂದ ಪಾದಯಾತ್ರೆ ಶುರುವಾಗಲಿದ್ದು, ಆಗಸ್ಟ್ 11 ರಂದು ಫ್ರೀಡಂ ಪಾರ್ಕ್ ಗೆ ಪಾದಯಾತ್ರೆ ತಲುಪಲಿದೆ. ಅಂದೇ ಬೃಹತ್ ಸಮಾವೇಶವನ್ನ ಜೆಡಿಎಸ್ ಹಮ್ಮಿಕೊಂಡಿದೆ. ಪಾದಯಾತ್ರೆಗೆ ಕೇಂದ್ರ ಸಚಿವ ಕುಮಾರಸ್ವಾಮಿ ಚಾಲನೆ ನೀಡಲಿದ್ದು, 3 ದಿನಗಳ ಪಾದಯಾತ್ರೆಯಲ್ಲಿ ಒಂದು ದಿನ ಮಾಜಿ ಪ್ರಧಾನಿ ದೇವೇಗೌಡರು ಭಾಗಿಯಾಗಲಿದ್ದಾರೆ.

Must Read