ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಂಡ್ಯದಲ್ಲಿ ರಾರಾಜಿಸುತ್ತಿವೆ ಜೆಡಿಎಸ್‌ಫ್ಲೆಕ್ಸ್, ಎಚ್‌ಡಿ ರೇವಣ್ಣ ʼಕಿಕ್‌ಔಟ್ʼ ಆಗಿದ್ದಾರೆ. ಹೆಚ್.ಡಿ ದೇವೇಗೌಡರ ಹಿರಿಯ ಮಗ ಹೆಚ್.ಡಿ ರೇವಣ್ಣ ಅವರನ್ನು ಕಿಕ್ ಔಟ್ ಮಾಡಲಾಗಿದ್ದು, ಮುಜುರಗ ತಪ್ಪಿಸಿಕೊಳ್ಳೋಕೆ ಈ ರೀತಿ ಮಾಡಲಾಗಿದ್ಯಾ ಎನ್ನುವ ಪ್ರಶ್ನೆ ಎದುರಾಗಿದೆ.
ಕುಮಾರಸ್ವಾಮಿ ಕೇಂದ್ರ ಸಚಿವರಾದ ಬಳಿಕ ಮಂಡ್ಯ ನಗರ ಸೇರಿದಂತೆ ಜಿಲ್ಲೆಯ ಹಲವೆಡೆ ಜೆಡಿಎಸ್‍ನಿಂದ ಬೃಹತ್ ಫ್ಲೆಕ್ಸ್ ಗಳನ್ನು ಅಳವಡಿಸಲಾಗಿದೆ. ಆದರೆ ಈ ಫ್ಲೆಕ್ಸ್ ಗಳಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಫೋಟೋ ಇಲ್ಲ.
ಫ್ಲೆಕ್ಸ್ ಗಳಲ್ಲಿ ಜೆಡಿಎಸ್ ಮುಖಂಡರ ಜೊತೆಗೆ ಯಡಿಯೂರಪ್ಪ, ವಿಜಯೇಂದ್ರ, ಆರ್.ಅಶೋಕ್ ಸೇರಿದಂತೆ ಹಲವು ಬಿಜೆಪಿ ನಾಯಕರ ಫೋಟೋಗಳನ್ನು ಬಳಸಲಾಗಿದೆ. ಜೊತೆಗೆ ಮಾಜಿ ಸಂಸದೆ ಸುಮಲತಾ, ಮಾಜಿ ಸಚಿವ ಹೆಚ್.ವಿಶ್ವನಾಥ್ ಫೋಟೋಗೂ ಪ್ಲೆಕ್ಸ್ ನಲ್ಲಿ ಸ್ಥಾನ ಕಲ್ಪಿಸಲಾಗಿದೆ. ಆದರೆ ರೇವಣ್ಣ ಫೋಟೋವನ್ನು ಮಾತ್ರ ಕೈಬಿಟ್ಟಿರುವುದು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ.