ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಗುವಹಾಟಿ, ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಅಡ್ವಾನ್ಸ್ಡ್ 2023ರ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ. ಪ್ರವೇಶ ಪರೀಕ್ಷೆಗೆ ನೋಂದಾಯಿಸಿಕೊಂಡ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.
ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://jeeadv.ac.in/ ನಲ್ಲಿ ತಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ ಲಾಗಿನ್ ಆಗುವ ಮೂಲಕ ಪ್ರವೇಶ ಪತ್ರವನ್ನು ಪಡೆಯಬಹುದು.
ಜೆಇಇ ಅಡ್ವಾನ್ಸ್ಡ್ 2023ರ ಪ್ರವೇಶ ಪರೀಕ್ಷೆಯನ್ನು ಜೂನ್ 04 ರಂದು ನಡೆಸಲು ನಿರ್ಧರಿಸಲಾಗಿದ್ದು, ಪತ್ರಿಕೆ -1 ಬೆಳಗ್ಗೆ 9 ರಿಂದ ಮಧ್ಯಾಹ್ನ 12ರವರೆಗೆ ನಡೆಯಲಿದೆ. ಇನ್ನೂ ಪತ್ರಿಕೆ- 2 ಮಧ್ಯಾಹ್ನ 2.30 ರಿಂದ ಸಂಜೆ 5.30ರ ವರೆಗೆ ನಡೆಸಲು ಸಮಯವನ್ನು ನಿಗದಿಪಡಿಸಲಾಗಿದೆ.