ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಂಬೆ ಐಐಟಿ ವತಿಯಿಂದ ಇಂದು ಜಂಟಿ ಪ್ರವೇಶ ಪರೀಕ್ಷೆ ನಡೆಸುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ವಿಧಿಸಿ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಆದೇಶಿಸಿದ್ದಾರೆ.
ಬೆಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಒಟ್ಟು 18 ಪರೀಕ್ಷಾ ಕೇಂದ್ರಗಳಲ್ಲಿ ಜೆಇಇ ಪರೀಕ್ಷೆ ನಡೆಯಲಿದೆ. ದೋಷರಹಿತ ಹಾಗೂ ಸುಸೂತ್ರವಾಗಿ ಪರೀಕ್ಷೆ ನಡೆಸುವ ದೃಷ್ಟಿಯಿಂದ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ ಕಲಂ 163ರಡಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಸ್ಥಳವೆಂದು ಘೋಷಿಸಲಾಗಿದೆ.
ಪರೀಕ್ಷಾ ಸಮಯದಲ್ಲಿ ಹತ್ತಿರದ ಎಲ್ಲಾ ಜೆರಾಕ್ಸ್ ಅಂಗಡಿ, ಕಂಪ್ಯೂಟರ್ ಸೆಂಟರ್ಗಳನ್ನು ಮುಚ್ಚುವಂತೆ ಆದೇಶ ಹೊರಡಿಸಲಾಗಿದೆ. ಕಾನ್ಪುರದ ಭಾರತೀಯ ತಂತ್ರಜ್ಞಾನ ಸಂಸ್ಥೆ ಹೊರಡಿಸಿದ ಪ್ರಕಟಣೆಯಂತೆ, ಈ ಪ್ರವೇಶ ಪರೀಕ್ಷೆಯು ದೇಶ, ವಿದೇಶಗಳ 224 ನಗರಗಳಲ್ಲಿ ನಡೆಯುತ್ತಿದೆ. ಇದರಲ್ಲಿ ವಿದೇಶಿ ನಗರಗಳಾದ ಕಠ್ಮಂಡು ಮತ್ತು ಅಬುಧಾಬಿಗಳೂ ಸೇರಿವೆ. ಸುಮಾರು 1.90 ಲಕ್ಷ ಅಭ್ಯರ್ಥಿಗಳು ಈ ಪ್ರವೇಶ ಪರೀಕ್ಷೆಗೆ ನೋಂದಾಯಿಸಿ ಕೊಂಡಿದ್ದಾರೆ. ಆ ಪೈಕಿ ಸುಮಾರು 1.85 ಲಕ್ಷ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗುವ ನಿರೀಕ್ಷೆಯಿದೆ.