Sunday, August 14, 2022

Latest Posts

ಸ್ಟೇರಿಂಗ್ ಕಟ್ ಆಗಿ ಪ್ರಪಾತಕ್ಕೆ ಉರುಳಿ ಬಿದ್ದ ಜೀಪ್: ಒಂದು ಸಾವು, 12 ಮಂದಿಗೆ ಗಾಯ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಚಾಮರಾಜನಗರದಲ್ಲಿ ಸ್ಟೇರಿಂಗ್ ಕಟ್ ಆದ ಕಾರಣ ಒಂದು ಜೀಪ್​ ಪ್ರಪಾತಕ್ಕೆ ಉರುಳಿ ಬಿದ್ದಿದ್ದು, ಒಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಇಲ್ಲಿನ ಮಲೈಮಹದೇಶ್ವರ ಬೆಟ್ಟದಲ್ಲಿ ಈ ಅಪಘಾತ ಸಂಭವಿಸಿದು, ಜೀಪ್​ನಲ್ಲಿದ್ದವರೆಲ್ಲ ತುಳಸೀಕೆರೆ ಗ್ರಾಮದವರಾಗಿದ್ದು, ಇವರೆಲ್ಲ ಇಂಡಿ ಬಸವೇಶ್ವರ ದೇವಸ್ಥಾನಕ್ಕೆ ಹೋಗುತ್ತಿದ್ದರು. ಅಪಘಾತದಲ್ಲಿ ತುಳಸೀಕೆರೆಯ ವೀರಣ್ಣ (75) ಮೃತ ಪಟ್ಟಿದ್ದಾರೆ.
ಜೀಪ್​ 30 ಅಡಿ ಆಳಕ್ಕೆ ಉರುಳಿ ನಜ್ಜುಗುಜ್ಜಾಗಿದೆ. ಪ್ರಯಾಣಿಕರ ಪೈಕಿ 12 ಮಂದಿಗೆ ಗಾಯಗಳಾಗಿದ್ದು, ಅವರಲ್ಲಿ ಮೂವರ ಪರಿಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ತಮಿಳುನಾಡಿನ ಮೆಟ್ಟೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss