ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕ್ ಅವರ ಪುತ್ರ ಜೀಶನ್ ಸಿದ್ದಿಕ್ ಅವರು ಇಂದು ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಬಣವನ್ನು ಸೇರಿದ್ದಾರೆ.
ಮಹಾರಾಷ್ಟ್ರ ವಿಧಾನ ಪರಿಷತ್ತಿನ ಚುನಾವಣೆಯ ಸಂದರ್ಭದಲ್ಲಿ ಪಕ್ಷದ ವಿರುದ್ಧ ಮತ ಚಲಾಯಿಸಿದ ಆರೋಪದ ಮೇಲೆ ಅವರನ್ನು ಆಗಸ್ಟ್‌ನಲ್ಲಿ ಕಾಂಗ್ರೆಸ್‌ನಿಂದ ಉಚ್ಚಾಟಿಸಲಾಗಿತ್ತು.
ಮುಂಬರುವ ವಿಧಾನಸಭಾ ಚುನಾವಣೆಗೆ ಬಾಂದ್ರಾ ಪೂರ್ವ ಕ್ಷೇತ್ರದಿಂದ ಜೀಶನ್ ಸಿದ್ದಿಕಿ ಅವರನ್ನು ತಮ್ಮ ಪಕ್ಷದ ಅಭ್ಯರ್ಥಿಯಾಗಿ ಎನ್‌ಸಿಪಿ ಘೋಷಿಸಿದೆ.