Wednesday, June 29, 2022

Latest Posts

ಕಾಶ್ಮೀರದಲ್ಲಿ ಜೈಶ್ ಉಗ್ರಗಾಮಿ ಸಹಿತ ಮೂವರ ಹತ್ಯೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕಾರ್ಡನ್ ಸರ್ಚ್ ಕಾರ್ಯಾಚರಣೆಯಲ್ಲಿ ಮೂವರು ಉಗ್ರರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿದ್ದಾರೆ. ಹತರಾದವರಲ್ಲಿ ಜೈಶ್-ಎ-ಮೊಹಮ್ಮದ್ ಉಗ್ರಗಾಮಿಯೂ ಸೇರಿದ್ದಾನೆ. ಜಮ್ಮು-ಕಾಶ್ಮೀರದ ಪುಲ್ವಾಮಾ ಮತ್ತು ಬಾರಾಮುಲ್ಲಾ ಜಿಲ್ಲೆಗಳಲ್ಲಿ ಭದ್ರತಾ ಪಡೆಗಳು ಕಾರ್ಡನ್ ಸರ್ಚ್ ಕಾರ್ಯಾಚರಣೆ ವೇಳೆ ಭಯೋತ್ಪಾದಕರು ಹತರಾಗಿದ್ದಾರೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಮಂಗಳವಾರ ಬಾರಾಮುಲ್ಲಾದ ತುಲಿಬಾಲ್ ಗ್ರಾಮದಲ್ಲಿ ಉಗ್ರರು ಇರುವ ಬಗ್ಗೆ ಮಾಹಿತಿ ಪಡೆದ ಭದ್ರತಾ ಪಡೆ ಕಾರ್ಡನ್‌ ಸರ್ಚ್‌ ಕಾರ್ಯಾಚರಣೆ ಕೈಗೊಂಡಿದ್ದಾರೆ. ಈ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಉಗ್ರರ ದಾಳಿಗೆ ಪ್ರತಿದಾಳಿ ನಡೆಸಿದ ಭದ್ರತಾ ಪಡೆ ಉಗ್ರನೊಬ್ಬನನ್ನು ಹತ್ಯೆಗೈದಿದ್ದಾರೆ.

ಮತ್ತೊಂದೆಡೆ, ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ತುಜ್ಜನ್‌ನಲ್ಲಿ ಭದ್ರತಾ ಪಡೆಗಳು ಇಬ್ಬರು ಉಗ್ರರನ್ನು ಕೊಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಅವರಲ್ಲಿ ಒಬ್ಬನನ್ನು ಜೈಶ್-ಎ-ಮೊಹಮ್ಮದ್‌ನ ಮಜೀದ್ ನಜೀರ್ ಎಂದು ಗುರುತಿಸಲಾಗಿದೆ. ಕೆಲ ದಿನಗಳ ಹಿಂದೆ ಎಸ್‌ಐ ಫಾರೂಕ್‌ ಅಹಮದ್‌ ಮಿರ್‌ ಕೊಲೆ ಪ್ರಕರಣದಲ್ಲೂ ನಜೀರ್‌ ಭಾಗಿಯಾಗಿದ್ದ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss