ಕಾಶ್ಮಿರದ ಕುಲ್ಗಾಮ್ ನಲ್ಲಿ ಜೈಶ್ ಉಗ್ರನ ಹತ್ಯೆಗೈದ ಭದ್ರತಾ ಪಡೆ

ಹೊಸದಿಗಂತ ಡಿಜಿಟಲ್ ಡೆಸ್ಕ್‌
ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಶುಕ್ರವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ವಿದೇಶಿ ಜೈಶ್-ಎ-ಮೊಹಮ್ಮದ್ (ಜೆಇಎಂ) ಉಗ್ರನನ್ನು ಹತ್ಯೆ ಮಾಡಲಾಗಿದೆ.
ಉಗ್ರರನ್ನು ಕಮ್ರಾನ್ ಭಾಯ್ ಅಲಿಯಾಸ್ ಹನೀಸ್ ಎಂದು ಗುರುತಿಸಲಾಗಿದೆ.
ಶುಕ್ರವಾರ ಮುಂಜಾನೆ ಶೋಪಿಯಾನ್ ಜಿಲ್ಲೆಯ ಕಪ್ರೆನ್ ಪ್ರದೇಶದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಎನ್‌ಕೌಂಟರ್ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಏನ್‌ ಕೌಟರ್‌ ನಲ್ಲಿ ಜೈಶ್‌ ಎ ಮೊಹಮದ್ ಭಯೋತ್ಪಾದಕ ಸಂಘಟನೆಯ ಉಗ್ರ ಸಾವನ್ನಪ್ಪಿದ್ದಾನೆ. ಕುಲ್ಗಾಮ್ ಶೋಪಿಯಾನ್ ಪ್ರದೇಶದಲ್ಲಿ ಸಕ್ರಿಯರಾಗಿದ್ದ ಕಮ್ರಾನ್ ಭಾಯಿ ಅಲಿಯಾಸ್ ಹನೀಸ್‌ ಮೃತ ಉಗ್ರ ಎಂದು ಗುರುತಿಸಲಾಗಿದೆ. ಇನ್ನೂ ಶೋಧ ಕಾರ್ಯ ಮುಂದುವರಿದಿದೆ ಎಂದು ಕಾಶ್ಮೀರದ ಎಡಿಜಿಪಿ ವಿಜಯ್ ಕುಮಾರ್ ಟ್ವೀಟ್ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!