ಜೆಟ್ ಏರ್‌ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಪತ್ನಿ ನಿಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ : 

ಜೆಟ್ ಏರ್‌ವೇಸ್  ಸಂಸ್ಥಾಪಕ ನರೇಶ್ ಗೋಯಲ್ ಪತ್ನಿ ಅನಿತಾ ಗೋಯಲ್ ಅವರು ಮುಂಬೈನ  ಆಸ್ಪತ್ರೆಯೊಂದರಲ್ಲಿ ನಿಧನರಾಗಿದ್ದಾರೆ.

ದೀರ್ಘಕಾಲದ ಕ್ಯಾನ್ಸರ್‌ನೊಂದಿಗೆ ಹೋರಾಟ ನಡೆಸುತ್ತಿದ್ದ ಅನಿತಾ ಗೋಯಲ್‌  ನಸುಕಿನ ಜಾವ 3 ಗಂಟೆಗೆ ಕೊನೆಯುಸಿರೆಳೆದಿದ್ದಾರೆ.

ಚಿಕಿತ್ಸೆಯ ಹೊರತಾಗಿಯೂ ಕಳೆದ ಕೆಲವು ತಿಂಗಳುಗಳಿಂದ ಅನಿತಾ ಅವರ ಆರೋಗ್ಯ ತೀವ್ರ ಹದಗೆಟ್ಟಿತ್ತು. ಅವರು ಕ್ಯಾನ್ಸರ್ ಮೂರನೇ ಹಂತದಲ್ಲಿತ್ತು ಎಂದು ತಿಳಿದು ಬಂದಿದೆ. ನರೇಶ್ ಗೋಯಲ್ ಸಹ ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!