ಹೊಸದಿಗಂತ ವರದಿ ಕಲಬುರಗಿ:
ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಯನ್ನು ಖಂಡಿಸಿ, ಜಿಲ್ಲೆಯ ವಿವಿಧ ದಲಿತ ಪರ ಸಂಘಟನೆಗಳು ಸೇರಿಕೊಂಡು ಶುಕ್ರವಾರ ಜೇವರ್ಗಿ ಬಂದ್ ಗೆ ಕರೆ ನೀಡಿದೆ.
ಜೇವರ್ಗಿ ಪಟ್ಟಣದಲ್ಲಿ ಟೈಯರ್ ಗೆ ಬೆಂಕಿ ಹಚ್ಚುವ ಮೂಲಕ ಪ್ರತಿಭಟನಾಕಾರರು ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ರೋಶ ಹೊರಹಾಕಿದ್ದು, ಅಮಿತ್ ಶಾ ರಾಜೀನಾಮೆ ನೀಡುವಂತೆ ಒತ್ತಾಯಿಸಿದ್ದಾರೆ.
ಶುಕ್ರವಾರ ಬೆಳಿಗ್ಗೆಯಿಂದಲೇ ಪ್ರತಿಭಟನಾಕಾರರು ರಸ್ತೆಗಿಳಿದು ರಸ್ತೆಗಳು ಬಂದ್ ಮಾಡಿಸಿದ್ದಾರೆ. ಜೇವರ್ಗಿ ಪಟ್ಟಣದಲ್ಲಿನ ಅಂಗಡಿ ಮುಂಗಟ್ಟುಗಳು ಬಂದ್ ಮಾಡಿಸಿ ಪ್ರತಿಭಟನೆ ನಡೆಸಲಾಗುತ್ತಿದೆ.