Wednesday, August 10, 2022

Latest Posts

ಚಿನ್ನಾಭರಣ ಕಳ್ಳತನ ಮಾಡುತ್ತಿದ್ದ ಅಂತರ್ ರಾಜ್ಯ ಕಳ್ಳರ ಬಂಧನ

ಹೊಸ ದಿಗಂತ ವರದಿ, ವಿಜಯಪುರ:

ಚಿನ್ನಾಭರಣ ಕಳ್ಳತನ ಮಾಡುತ್ತಿದ್ದ ನಾಲ್ಕು ಜನ ಅಂತರ್ ರಾಜ್ಯ ಕಳ್ಳರನ್ನು ಬಂಧಿಸಲಾಗಿದ್ದು, ಆರೋಪಿಗಳಿಂದ 9,75,000 ರೂ.ಗಳ ಮೌಲ್ಯದ ಚಿನ್ನಾಭರಣ ಸೇರಿದಂತೆ ಕಾರೊಂದನ್ನು ಜಪ್ತಿ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್ ಹೇಳಿದರು.
ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪಕ್ಕದ ಮಹಾರಾಷ್ಟ್ರದ ಸಂತೋಷ ಉರ್ಫ್ ಸತೀಶ ಪ್ರಲ್ಹಾದ ಚವ್ಹಾಣ, ಕಿರಣ ಉರ್ಫ್ ಕಿರಣ್ಯಾ ನಾಮದೇವ ಕಾಳೆ, ಕಿಶೆನ್ ಉರ್ಫ್ ಕಲ್ಲಪ್ಪ ರತನ್ ಚವ್ಹಾಣ, ರೋಹಿತ ತಾನಾಜಿ ಚವ್ಹಾಣ ಬಂಧಿತ ಆರೋಪಿಗಳಾಗಿದ್ದಾರೆ ಎಂದರು.
ಈ ಆರೋಪಿಗಳು ವಿಜಯಪುರ ಗ್ರಾಮೀಣ ವೃತ್ತದ ತಿಕೋಟಾ, ಬಬಲೇಶ್ವರ ಹಾಗೂ ವಿಜಯಪುರ ಗ್ರಾಮೀಣ ಠಾಣೆ ವ್ಯಾಪ್ತಿಯ ಮನೆಗಳಲ್ಲಿನ ಚಿನ್ನಾಭರಣ ಕಳ್ಳತನ ಮಾಡಿದ್ದು, ಈ ಕುರಿತು ತನಿಖೆಗೆ ಮುಂದಾದಾಗ ಆರೋಪಿಗಳು ಸಿಕ್ಕಿ ಬಿದ್ದಿದ್ದಾರೆ. 4,60,000 ಲಕ್ಷ ರೂ.ಗಳ ಮೌಲ್ಯದ 100 ಗ್ರಾಂ ಚಿನ್ನಾಭರಣ, 15,000 ರೂ.ಗಳ ಮೌಲ್ಯದ 200 ಗ್ರಾಂ ಬೆಳ್ಳಿ ಹಾಗೂ 5 ಲಕ್ಷ ರೂ.ಗಳ ಕಾರು ಸೇರಿದಂತೆ 9,75,000 ಲಕ್ಷ ರೂ.ಗಳ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ ಎಂದು ಹೇಳಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss